ಬೆಂಗಳೂರು: ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಬಿಟ್ಟುಕೊಡಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಶುಕ್ರವಾರ ವಿಧಾನಸಭೆಗೆ ತಿಳಿಸಿದರು.
ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಅವರು ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು.
ಇದನ್ನೂ ಓದಿ: ಭಕ್ತರ ಹರ್ಷೋದ್ಗಾರಗಳ ನಡುವೆ ಮಾರಿ ಮೂರ್ತಿ ನಿಮಜ್ಜನ
ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐ ಟಿ ಐ ಆರ್) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿ, ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು.ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ ಎಂದು ವಿವರಿಸಿದರು.
ಇದನ್ನೂ ಓದಿ: ಮರುಭೂಮಿಯಲ್ಲಿ ನೀರು ಕಂಡು ಖುಷಿಯಿಂದ ಕುಣಿದಾಡುವ ಒಂಟೆ
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಹೇಳಿದರು.
ಕೈಗಾರಿಕಾ ನೀತಿ (2020-25), ಕರ್ನಾಟಕ ಏರೋಸ್ಪೇಸ್ & ಡಿಫೆನ್ಸ್ ನೀತಿ (2022-27) ಮತ್ತು ವಿದ್ಯುತ್ ಚಾಲಿತ ವಾಹನ & ಇಂಧನ ಸಂಗ್ರಹಣೆ ನೀತಿ (2017)ಯಡಿ ನಿಗದಿಗೊಳಿಸಿರುವ ಉತ್ತೇಜಕ ಕ್ರಮಗಳು ಈ ವಲಯದಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಲು ಪೂರಕವಾಗಿವೆ ಎಂದು ಪಾಟೀಲ ಅಭಿಪ್ರಾಯಪಟ್ಟರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.