ನವದೆಹಲಿ: ತರಕಾರಿ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ದೇಶದ ಜನತೆಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಇಂದಿನಿಂದ ಪ್ರತಿ ಕೆಜಿ ಟೊಮೇಟೊವನ್ನು 80 ರೂ.ನಂತೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
ದೇಶದ 500ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಬೆಲೆ ಏರಿಕೆ ಪರಿಸ್ಥಿತಿಯ ಮರು ಮೌಲ್ಯಮಾಪನ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಹಕಾರಿ ಸಂಸ್ಥೆಗಳಾದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಮತ್ತು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (NAFED)ಮೂಲಕ ಮಾರಾಟವಾಗುವ ಟೊಮೇಟೊಗಳ ಚಿಲ್ಲರೆ ಬೆಲೆಯನ್ನು ಕೇಂದ್ರವು ಭಾನುವಾರ ಕಡಿತಗೊಳಿಸಿದೆ.
ಇದನ್ನೂ ಓದಿ: ಐದು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ..! ನಾಳೆ ಭಾರೀ ಮಳೆ ಸಾಧ್ಯತೆ
ನಾಫೆಡ್ ಮತ್ತು ಎನ್‌ಸಿಸಿಎಫ್ ಮೂಲಕ ಇದೀಗ ಪ್ರತಿ ಕೆಜಿಗೆ 80 ರೂ.ಗೆ ಟೊಮೇಟೊ ಮಾರಾಟ ಮಾಡಲಿದೆ. ಹಿಂದಿನ 90 ರೂ.ಗಿಂತ 10 ರೂ. ಡಿಸ್ಕೌಂಟ್‍ನಲ್ಲಿ ರಾಷ್ಟ್ರ ರಾಜಧಾನಿ ದೆಹಲಿ, ನೋಯ್ಡಾ, ಲಕ್ನೋ, ಕಾನ್ಪುರ್, ವಾರಾಣಸಿ, ಪಾಟ್ನಾ, ಮುಜಾಫರ್‌ಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಾರಾಟ ಪ್ರಾರಂಭವಾಗಿದೆ. ಆಯಾ ಸ್ಥಳಗಳಲ್ಲಿ ಮಾರುಕಟ್ಟೆ ಬೆಲೆ ಅವಲಂಬಿಸಿ ಸೋಮವಾರದಿಂದ ಹೆಚ್ಚಿನ ನಗರಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಕೇಂದ್ರವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್, ‘ಸರ್ಕಾರದ ಮಧ್ಯಪ್ರವೇಶದಿಂದ ಪ್ರತಿ ಕೆಜಿಗೆ 90 ರೂ.ಗೆ ರಿಯಾಯಿತಿ ದರದಲ್ಲಿ ಟೊಮೇಟೊವನ್ನು ದೇಶದ ಹಲವಾರು ಸ್ಥಳಗಳಲ್ಲಿ ಮಾರಾಟ ಮಾಡಲು ಸಗಟು ಬೆಲೆ ಇಳಿಕೆಯಾಗಿದೆ. ಇದು ಜನರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ’ ಎಂದಿದ್ದಾರೆ.
ಇದನ್ನೂ ಓದಿ: ಮಮತಾ ಬ್ಯಾನರ್ಜೀ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದ ಬಿಜೆಪಿ..!
ದೇಶದ 500ಕ್ಕೂ ಸ್ಥಳಗಳಲ್ಲಿ ಬೆಲೆ ಏರಿಕೆಯ ಪರಿಸ್ಥಿತಿಯ ಮರು ಮೌಲ್ಯಮಾಪನದ ನಂತರ ಭಾನುವಾರ(ಜುಲೈ 16)ದಿಂದ ಕೆಜಿಗೆ 80 ರೂ.ನಂತೆ ಟೊಮೇಟೊ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಜನಸಾಮಾನ್ಯರಿಗೆ ಬೆಲೆ ಏರಿಕೆಯಿಂದ ಪರಿಹಾರ ನೀಡಲು ಭಾರತ ಸರ್ಕಾರ ಬದ್ಧವಾಗಿದೆ’ ಎಂದು ಅವರು ಹೇಳಿದ್ದಾರೆ.
ದೇಶದಾದ್ಯಂತ ಟೊಮೇಟೊ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ಆಂಧ್ರಪ್ರದೇಶ ಹಾಗೂ ಕರ್ನಾಟಕದ ಮಾರುಕಟ್ಟೆಗಳಿಂದ ಟೊಮೇಟೊ ಖರೀದಿ ಮಾಡುವಂತೆ ಕೇಂದ್ರ ಸರ್ಕಾರವು ಸಹಕಾರ ಕ್ಷೇತ್ರದ ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ನಿರ್ದೇಶಿಸಿತ್ತು. ದೇಶದ ಕೆಲವು ಪ್ರದೇಶಗಳಲ್ಲಿ ಟೊಮೇಟೊ ಬೆಲೆ ಪ್ರತಿ ಕೆಜಿಗೆ 200 ರೂ.ಗಿಂತಲೂ ಹೆಚ್ಚಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.