ಕಲಬುರಗಿ: ಕರ್ನಾಟಕ ಸೇರಿದಂತೆ ದೇಶದಾದ್ಯಂತ ರೈಲುಗಳ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ‘ವಂದೇ ಭಾರತ್ ಎಕ್ಸಪ್ರೆಸ್’ ಹಾಗೂ ‘ಕಲಬುರಗಿ-ಬೀದರ್ ಪ್ಯಾಸೆಂಜರ್’ ರೈಲಿನ’ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ಬಾಗಲಕೋಟೆ-ಮೈಸೂರು ನಡುವೆ ಚಲಿಸುವ ‘ಬಸವ ಎಕ್ಸ್ ಪ್ರೆಸ್’ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಇದನ್ನೂ ಓದಿ: ಸ್ಪೀಕರ್ ಹುದ್ದೆ ದುರುಪಯೋಗವಾಗುತ್ತಿದೆ : ಬಸವರಾಜ ಬೊಮ್ಮಾಯಿ ಆಕ್ರೋಶ
ಕಲಬುರಗಿ ತಾಲೂಕಿನ ಬಬಲಾದ ಗ್ರಾಮದ ಬಳಿ ಬುಧವಾರ(ಜುಲೈ 19) ರಾತ್ರಿ ‘ಬಸವ ಎಕ್ಸ್ ಪ್ರೆಸ್’ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಇದರಿಂದ ರೈಲಿನ AC A1 ಬೋಗಿಯ ಗಾಜು ಪುಡಿ-ಪುಡಿಯಾಗಿದ್ದು, ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇದನ್ನೂ ಓದಿ: ಕೆರೆಗಳ ಮೇಲೆ ಫ್ಲೋಟಿಂಗ್ ಸೋಲಾರ್ ಪ್ಯಾನೆಲ್ ಅಳವಡಿಸಲು ಚಿಂತನೆ : ಸಚಿವ ಎನ್.ಎಸ್ ಭೋಸರಾಜ್
ದುಷ್ಕರ್ಮಿಗಳು ರೈಲಿನ ಇಂಜಿನ್ ಮೇಲೂ ಸಹ ಕಲ್ಲು ಎಸೆದಿದ್ದು, ಗಾಜು ಪುಡಿ ಪುಡಿಯಾಗಿದೆ. ಬಾಗಲಕೋಟೆ-ಮೈಸೂರು ಮಧ್ಯೆ ನಿತ್ಯ ಸಂಚರಿಸುವ ‘ಬಸವ ಎಕ್ಸ್ ಪ್ರೆಸ್’ ರೈಲು, ಕಲಬುರಗಿ, ವಾಡಿ, ಯಾದಗಿರಿ ಮಾರ್ಗವಾಗಿ ಸಂಚಾರಿಸುತ್ತದೆ. ಈ ಬಗ್ಗೆ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.