Sowjanya Case: 2012ರ ಆಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ/ಉಜಿರೆಯಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಇಂದಿಗೂ ನ್ಯಾಯ ಸಿಕ್ಕಿಲ್ಲ. ಘಟನೆ ಸಂಬಂಧ ಈಗಾಗಲೇ ರಾಜ್ಯದ 10 ಅಧಿಕ ಮುಖ್ಯ ಸಂಘನೆಗಳು ನ್ಯಾಯಕ್ಕಾಗಿ ಪರಿತಪಿಸುತ್ತಿದೆ.
ಘಟನೆ ಸಂಬಂಧ ಇತ್ತಿಚೇಗೆ ರಾಜ್ಯ ಹಲವಡೆ ಧರಣಿ ಮೂಲಕ ಪುನಾರಂಭಿಸಿದ್ದಾರೆ.ಇದೀಗ ನಟ ದುನಿಯಾ ಈ ವಿಷಯ ಸಂಬಂಧ ಮಂಜುನಾಥನ ದರ್ಶನದ ಬಗ್ಗೆಯೂ ಬೇಸರ ವ್ಯಕ್ತ ಪಡಿಸಿದ್ದಾರೆ.
ನಟ ದುನಿಯಾ ವಿಜಯ್,ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ನಾಯಿಯಾದ ಮಾನವ... ಈತ ಪ್ರಾಣಿಯಂತೆ ಕಾಣಲು ಮಾಡಿದ ಖರ್ಚಿಗೆ ಒಂದು ಮನೆ ಕಟ್ಟಬಹುದಿತ್ತು...!
ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು ಎಂದು ಬುದ್ಧ ತತ್ವಗಳನ್ನು ಹೋಲಿಸಿ ಮಂಜುನಾಥನ ದರ್ಶನದ ಬಗ್ಗೆ ಮುಕ್ತವಾಗಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.
ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು - ಬುದ್ಧ#Justiceforsoujanya pic.twitter.com/wlxF84dHY4
— Duniya Vijay (@OfficialViji) August 1, 2023
ಇದನ್ನು ನೋಡಿದ ನೆಟ್ಟಿಗರು ಅನ್ಯಾಯ ಪರ ಧ್ವನಿ ಎತ್ತುತ್ತಿರುವುದಕ್ಕೆ ಶ್ಲಾಘಿಸಿದ್ದಾರೆ. ಇನ್ನು ಕೆಲವರು ಅವರ ಟ್ವೀಟ್ ಗೆ ಕಿಡಿಕಾರಿದ್ಧಾರೆ. ಅದೇನೆ ಇರಲಿ ಅನ್ಯಾಯ ಆದಾಗ ಸ್ಪಂದಿಸುವ ಮನಸ್ಥಿತಿ ಮೊದಲು ಬರಬೇಕು ಇಲ್ಲಿ ಜಾತಿ ಧರ್ಮ ಎಂಬುವುದು ಮುಖ್ಯವಾಗುವುದಿಲ್ಲ. ನ್ಯಾಯ ಅಷ್ಟೆ ಮುಖ್ಯವಾಗಿರುತ್ತದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.