ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸಿಎಂ ಸೂಚನೆ

ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ  ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲಸ ನಿಲ್ಲಿಸಿಲ್ಲ. ತನಿಖೆಯಾಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎ ನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. 

Written by - Yashaswini V | Last Updated : Aug 8, 2023, 12:21 PM IST
  • ಉಡುಪಿ ವೀಡಿಯೋ ಪ್ರಕರಣದ ಬಗ್ಗೆಯೂ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ
  • ಪ್ರಕರಣವನ್ನು ಸಿಐಡಿಗೆ ವಹಿಸಿದ್ದು ನಿನ್ನೆ ಆದೇಶವಾಗಿದೆ.
  • ಡಿವೈಎಸ್ಪಿ ಮಟ್ಟದ ಅಧಿಕಾರಿಗೆ ತನಿಖೆ ಮಾಡಲು ಸೂಚಿಸಲಾಗಿತ್ತು.
ಸಚಿವ ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸಿಎಂ ಸೂಚನೆ title=

ಬೆಂಗಳೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ  ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು   ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ರ ಅಸಲಿ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ, ಈ  ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ- 1 ರೂ.ಗೆ ರಾಗಿ ಮುದ್ದೆ ನೀಡಿ ಹೋಟೇಲ್‌ ತಿಂಡಿಗಳ ಬೆಲೆ ಏರಿಕೆ ಖಂಡಿಸಿದ ವಾಟಾಳ್..!

ಸತ್ಯಾಸತ್ಯತೆ ತಿಳಿಯಲು ತನಿಖೆ:
ಇದೇ ವೇಳೆ ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ  ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲಸ ನಿಲ್ಲಿಸಿಲ್ಲ. ತನಿಖೆಯಾಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎ ನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. 

ಉಡುಪಿ ಪ್ರಕರಣ: ಉನ್ನತ ತನಿಖೆಗಾಗಿ  ಸಿಐಡಿಗೆ
ಇದೇ ಸಂದರ್ಭದಲ್ಲಿ ಉಡುಪಿ ವೀಡಿಯೋ ಪ್ರಕರಣದ ಬಗ್ಗೆಯೂ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಪ್ರಕರಣವನ್ನು ಸಿಐಡಿಗೆ ವಹಿಸಿದ್ದು ನಿನ್ನೆ ಆದೇಶವಾಗಿದೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗೆ ತನಿಖೆ ಮಾಡಲು ಸೂಚಿಸಲಾಗಿತ್ತು. ಆದರೆ ಇನ್ನೂ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಸಿಐಡಿ ಗೆ ವಹಿಸಲಾಗಿದೆ ಎಂದು ತಿಳಿಸಿದರು.  

ಇದನ್ನೂ ಓದಿ- ಕರ್ನಾಟಕ ವಿಪಕ್ಷ ನಾಯಕನ ಸ್ಥಾನಕ್ಕೆ ಪ್ರಧಾನಿ ಮೋದಿ ಟವಲ್ ಹಾಕಿದ್ದಾರಾ?: ಕಾಂಗ್ರೆಸ್ ಟೀಕೆ

ಶಾಸಕ ಯಶ್ ಪಾಲ್ ಸುವರ್ಣ ಅವರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿಐಡಿಗೆ ಕೊಟ್ಟರೂ ಬೇಡ  ಎನ್ನುತ್ತಾರೆ. ಅವರ ಕಾಲದಲ್ಲಿ ಸಿಐಡಿಗೆ ಕೊಟ್ಟಿದ್ದ ಪ್ರಕರಣಗಳು ಮುಚ್ಚಿಹೋಗಿವೆಯೇ  ಎಂದು ಪ್ರಶ್ನಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News