ನವದೆಹಲಿ: ಹೆಗಲ ಮೇಲೆ ಮಗಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೊರಗೆ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ಘಟನೆಯಲ್ಲಿ ಆತನಿಗೆ ಗಂಭೀರ ಗಾಯಗಳಾಗಿದ್ದು, ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಆತನ ಪುತ್ರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಮೊದಲೇ ಪ್ಲಾನ್ ಮಾಡಿಕೊಂಡು ಬೈಕ್ನಲ್ಲಿ ಬಂದಂತೆ ಕಾಣುವ ದುಷ್ಕರ್ಮಿಗಳು ತುಂಬಾ ಹತ್ತಿರದಿಂದಲೇ ಗುಂಡಿನ ದಾಳಿ ನಡೆಸಿದ್ದಾರೆ. ಕಿರಿದಾದ ಪ್ರದೇಶದ ರಸ್ತೆಯಲ್ಲಿ ತನ್ನ ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ 2 ಬೈಕ್ಗಳು ಆಗಮಿಸುತ್ತವೆ. ಬೈಕ್ನಿಂದ ಕೆಳಗೆ ಇಳಿಯುವ ಅಪರಿಚತನೊಬ್ಬ ವ್ಯಕ್ತಿಯ ಹತ್ತಿರ ಬಂದು ಗುಂಡು ಹಾರಿಸುತ್ತಾನೆ.
ಇದನ್ನೂ ಓದಿ: NEET UG 2023 Seat Round 1 ಫಲಿತಾಂಶ ಇಂದು ಪ್ರಕಟ: ರಿಸಲ್ಟ್ ಹೀಗೆ ಪರಿಶೀಲಿಸಿ
ಗುಂಡಿನ ದಾಳಿಯಿಂದ ವ್ಯಕ್ತಿ ಹಠಾತ್ ಕುಸಿದುಬೀಳುತ್ತಾನೆ. ಈ ವೇಳೆ ಗುಂಡು ಹಾರಿಸಿದ ವ್ಯಕ್ತಿ ಮುಂದೆ ನಿಂತಿದ್ದ ಬೈಕ್ ಹತ್ತಿ ಎಸ್ಕೇಪ್ ಆಗುತ್ತಾನೆ. ಈ ಎಲ್ಲಾ ಘಟನೆಯು ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡಲು ಭಯಾನಕವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿರುವ ವ್ಯಕ್ತಿಯನ್ನು ಶೋಯೆಬ್ ಎಂದು ಗುರುತಿಸಲಾಗಿದೆ. ಆತ ಸ್ಥಳೀಯ ವ್ಯಾಪಾರಿಯಾಗಿದ್ದು, ಅಂದು ತನ್ನ ಮಗಳೊಂದಿಗೆ ಶಹಜಹಾನ್ಪುರದಲ್ಲಿರುವ ಸಂಬಂಧಿಕರ ಮನೆಗೆ ಹೋಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ShahaJahanPur: Heart-wrenching incident
Shoaib (28) was carrying his daughter on his shoulder, the assaiIant came and shøt him in the head from point-blank range.
Shoaib has been referred to Delhi for better treatment... Prayers needed. pic.twitter.com/WfYdMRoWya
— زماں (@Delhiite_) August 14, 2023
ಇದನ್ನೂ ಓದಿ: 10 ದಿನಗಳವರೆಗೆ ಮಥುರಾದ ಕೃಷ್ಣ ಜನ್ಮಭೂಮಿ ಬಳಿ ಯಾವುದೇ ಕಟ್ಟಡ ಧ್ವಂಸಗೊಳಿಸುವಂತಿಲ್ಲ- ಸುಪ್ರೀಂ ಆದೇಶ
ಆರೋಪಿಗಳಾದ ಗುಫ್ರಾನ್ ಮತ್ತು ನದಿಮ್ರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. 3ನೇ ಆರೋಪಿ ತಾರಿಕ್ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಮೀನಾ ತಿಳಿಸಿದ್ದಾರೆ.
ಆರೋಪಿಗಳ ಪೈಕಿ ಒಬ್ಬ ಶೋಯೆಬ್ ಸೋದರ ಸಂಬಂಧಿಯಾಗಿದ್ದಾನೆ. ಹಳೆಯ ದ್ವೇಷದಿಂದ ಆತ ಗುಂಡಿನ ದಾಳಿ ನಡೆಸಿದ್ದಾನೆ. ಈ ಬಗ್ಗೆ ನಾವು ಪ್ರರಕಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.