ಎನ್‌‌ಡಿಎಗೆ ಭಾರೀ ಮುನ್ನಡೆ: ನರೇಂದ್ರ ಮೋದಿಗೆ ಶುಭಾಶಯ ಕೋರಿದ ಶ್ರೀಲಂಕಾ, ಇಸ್ರೇಲ್ ಪ್ರಧಾನಿಗಳು!

ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಇಂದು ಬೆಳಿಗ್ಗೆಯಿಂದ ಆರಂಭವಾಗಿದ್ದು, 545 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 351 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 

Last Updated : May 23, 2019, 02:05 PM IST
ಎನ್‌‌ಡಿಎಗೆ ಭಾರೀ ಮುನ್ನಡೆ: ನರೇಂದ್ರ ಮೋದಿಗೆ ಶುಭಾಶಯ ಕೋರಿದ ಶ್ರೀಲಂಕಾ, ಇಸ್ರೇಲ್ ಪ್ರಧಾನಿಗಳು! title=

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಎನ್​​ಡಿಎ ಮೈತ್ರಿಕೂಟ ವಿಜಯದತ್ತ ದಾಪುಗಾಲು ಇಡುತ್ತಿರುವ ಬೆನ್ನಲ್ಲೇ ಶ್ರೀಲಂಕಾ ಪ್ರಧಾನ ಮಂತ್ರಿ ರಣಲ್ ವಿಕ್ರಮೇಸಿಂಗ್ ಶುಭ ಹಾರೈಸಿದ್ದಾರೆ.

"ಚುನಾವಣೆಯಲ್ಲಿ ಭರ್ಜರಿ ವಿಜಯದತ್ತ ಸಾಗಿರುವ ನರೇಂದ್ರ ಮೋದಿಗೆ ಅಭಿನಂದನೆಗಳು! ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಲ್ಲಿ ನಾವಿದ್ದೇವೆ" ಎಂದು ಶ್ರೀಲಂಕಾ ಪ್ರಧಾನ ಮಂತ್ರಿ ರಣಲ್ ವಿಕ್ರಮೇಸಿಂಗ್ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೇತನ್ಯಾಹು ಸಹ ನರೇಂದ್ರ ಮೋದಿಗೆ ಶುಭ ಹಾರೈಸಿದ್ದಾರೆ. "ನನ್ನ ಸ್ನೇಹಿತರಾದ ನರೇಂದ್ರ ಮೋದಿ ಅವರೇ, ನಿಮ್ಮ ಚುನಾವಣೆಯ ವಿಜಯಕ್ಕಾಗಿ ನಮ್ಮ ಶುಭಾಶಯಗಳು! ಈ ಚುನಾವಣಾ ಫಲಿತಾಂಶಗಳು ಮತ್ತೆ ನಿಮ್ಮ ನಾಯಕತ್ವವನ್ನು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಸಾಬೀತುಪಡಿಸುತ್ತವೆ. ನಾವು ಒಟ್ಟಾಗಿ ಭಾರತ ಮತ್ತು ಇಸ್ರೇಲ್ ನಡುವಿನ ನಿಕಟ ಸ್ನೇಹ ಬಲಪಡಿಸುವ ಯತ್ನವನ್ನು ಮುಂದುವರಿಸೋಣ" ಎಂದು ಟ್ವೀಟ್ ಮಾಡಿದ್ದಾರೆ.

ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಇಂದು ಬೆಳಿಗ್ಗೆಯಿಂದ ಆರಂಭವಾಗಿದ್ದು, 545 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 351 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಕಾಂಗ್ರೆಸ್ 85, ಇತರ ಪ್ರಾದೇಶಿಕ ಪಕ್ಷಗಳು 106 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಹೀಗಾಗಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತೆ ಕೇಂದ್ರದಲ್ಲಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.
 

Trending News