ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಬೈತಖೋಲ ಬಂದರಿನಲ್ಲಿ ಸಾಮಾನ್ಯಕ್ಕಿಂತ ದೊಡ್ಡ ಗಾತ್ರದ ಬಂಗುಡೆ ಮೀನು ಬಲೆಗೆ ಬಿದ್ದಿದ್ದು, ಮೀನುಗಾರರಿಗೆ ಅಚ್ಚರಿ ಮೂಡಿಸಿದೆ.
ಬೈತಕೋಲದ ಆನಂದ ರಾಮ ಹರಿಕಂತ್ರ ಅವರು ಆಳಸಮುದ್ರದಲ್ಲಿ ಮೀನು ಹಿಡಿಯುವಾಗ ಅವರ ಬಲೆಗೆ ಈ ಮೀನು ಬಿದ್ದಿದೆ. ಈ ಬಂಗುಡೆ ಮೀನು ಬರೋಬ್ಬರಿ 1.23 ಕೆಜಿ ತೂಕವಿದ್ದು, 19 ಇಂಚು ಉದ್ದ ಮತ್ತು 4.5 ಇಂಚು ಅಗಲವಿದೆ.
ಇದನ್ನೂ ಓದಿ: ನೂರು ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿ
ಸಾಮಾನ್ಯವಾಗಿ ಕಂಡುಬರುವ ಬಂಗುಡೆ ಮೀನುಗಳಿಗಿಂತ ಈ ಮೀನು ದೊಡ್ಡದಿದೆ. ಈ ಬಂಗುಡೆ ಮೀನನ್ನು ನವೀನ ಹರಿಕಂತ್ರ ಎನ್ನುವವರು ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ನೀಡಿದ್ದು, ಸಾರ್ವಜನಿಕ ವೀಕ್ಷಣೆಗೆ ಇಡಲಾಗಿದೆ.
ಈವರೆಗೆ ಲಭ್ಯವಾಗದಂತಹ ಬೃಹತ್ ಗಾತ್ರದ ಬಂಗುಡೆ ಮೀನು ಕಾರವಾರದ ಅರಬ್ಬಿ ಸಮುದ್ರದಲ್ಲಿ ಸಿಕ್ಕಿದ್ದು ಅಚ್ಚರಿ ಮೂಡಿಸಿದೆ. ಇಷ್ಟು ದೊಡ್ಡ ಬಂಗುಡೆ ಮೀನು ಕರಾವಳಿಯಲ್ಲಿ ಪತ್ತೆಯಾಗಿರುವ ಮಾಹಿತಿ ಇಲ್ಲವೆಂದು ಕರ್ನಾಟಕ ವಿಶ್ವ ವಿದ್ಯಾನಿಲಯದ ಕಡಲ ವಿಜ್ಞಾನ ವಿಭಾಗ ತಿಳಿಸಿದೆ.
ಇದನ್ನೂ ಓದಿ: "ಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲೀಕರು"
ಇದೀಗ ದೊಡ್ಡ ಗಾತ್ರದ ಬಂಗುಡೆಯನ್ನು ಸಾರ್ವಜನಿಕರ ವೀಕ್ಷಣೆಗಾಗಿ ಕಾರವಾರ ಕಡಲವಿಜ್ಞಾನ ಕೇಂದ್ರದಲ್ಲಿ ಪ್ರದರ್ಶನಕ್ಕೆ ಇಡಲಾಗುವುದು ಎಂದು ವಿನಾಯಕ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.