ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿರುವುದರಿಂದ ವೈದ್ಯರು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆಂದು ತಿಳಿದುಬಂದಿದೆ.
ಎಚ್ಡಿಕೆ ಆರೋಗ್ಯದ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅಪೊಲೊ ಆಸ್ಪತ್ರೆ, ‘ಕುಮಾರಸ್ವಾಮಿಯವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಬಳಲಿಕೆ ಮತ್ತು ಅಸ್ವಸ್ಥೆಯಿಂದ ಬಳಲುತ್ತಿದ್ದ ಕುಮಾರಸ್ವಾಮಿಯವರಿಗೆ ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಗೆ ಅವರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ’ ಎಂದು ತಿಳಿಸಿದೆ.
ಇದನ್ನೂ ಓದಿ: ಕೊಪ್ಪಳ ಮಾರ್ಗವಾಗಿ ಮುಂಬೈ, ಸೊಲ್ಲಾಪುರಕ್ಕೆ ರೈಲ್ವೆ ಸಂಚಾರ ಆರಂಭ
2 ದಿನ ಆಸ್ಪತ್ರೆಯಲ್ಲಿರುತ್ತಾರೆ
Health bulletin on HD Kumaraswamy | "Currently, he is hemodynamically stable, comfortable and coherent and has been kept under close observation," Apollo Specialty Hospital, Jayanagar pic.twitter.com/qMDI9wlyqz
— ANI (@ANI) August 30, 2023
ಇನ್ನು ಎಚ್.ಡಿ.ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅನಿತಾ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ‘ಬೆಳಗಿನ ಜಾವ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದೆ. ಯಾವುದೇ ಉಹಾಪೋಹದ ಸುದ್ದಿಗಳನ್ನು ಯಾರೂ ನಂಬಬೇಡಿ. ಕುಮಾರಸ್ವಾಮಿಯವರಿಗೆ ಯಾವುದೇ ತೊಂದರೆಯಿಲ್ಲ. ವೈದ್ಯರು ನಾಳೆಯೇ ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದಾರೆ. ಎಚ್ಡಿಕೆ ಮನೆಗೆ ಬಂದರೆ ರೆಸ್ಟ್ ಮಾಡುವುದಿಲ್ಲ, ಹೀಗಾಗಿ ಇನ್ನೂ 2 ದಿನ ಆಸ್ಪತ್ರೆಯಲ್ಲೇ ಇರುತ್ತಾರೆ’ ಎಂದು ಹೇಳಿದ್ದಾರೆ.
ಕೋಲಾರ ಪ್ರವಾಸ ರದ್ದು!
2024ರ ಲೋಕಸಭಾ ಚುನಾವಣೆ ಹಿನ್ನಲೆ ಪಕ್ಷದ ಕಚೇರಿಯಲ್ಲಿ ಸರಣಿ ಸಭೆ ನಡೆಸಿದ್ದ ಕುಮಾರಸ್ವಾಮಿಯವರು, ಬುಧವಾರ ಕೋಲಾರದ ಶ್ರೀನಿವಾಸಪುರದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಅರಣ್ಯ ಇಲಾಖೆ ಒತ್ತುವರಿ ತೆರವು ಮಾಡುವ ವೇಳೆ ರೈತರ ಬೆಳೆಗಳು ನಷ್ಟವಾಗಿತ್ತು. ಹೀಗಾಗಿ ರೈತರೊಂದಿಗೆ ಮಾತನಾಡಲು ಎಚ್ಡಿಕೆ ಕೋಲಾರ ಪ್ರವಾಸ ಕೈಗೊಂಡಿದ್ದರು. ಆದರೆ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಕೋಲಾರ ಪ್ರವಾಸ ರದ್ದಾಗಿದೆ.
ಇದನ್ನೂ ಓದಿ: "ಇನ್ನಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡುತ್ತೇವೆ"
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.