ಸಮುದ್ರಕೊರೆತ ತಡೆಯಲು ತಡೆಗೋಡೆ ನಿರ್ಮಾಣ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಉಳ್ಳಾಲ ಮತ್ತು ಉದಯವಾರದಲ್ಲಿ ತಡೆಗೋಡೆ ನಿರ್ಮಾಣವಾದ ಬಳಿಕ ಕಡಲಕೊರೆತ ಕಡಿಮೆಯಾಗಿದ್ದು ಮೀನುಗಾರಿಕಾ ಚಟುವಟಿಕೆಗಳು ಹೆಚ್ಚಾಗಿದೆ- ಸಮೀಕ್ಷೆಯ ವರದಿ

Last Updated : May 29, 2019, 04:51 PM IST
ಸಮುದ್ರಕೊರೆತ ತಡೆಯಲು ತಡೆಗೋಡೆ ನಿರ್ಮಾಣ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ title=
Representational Image

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ  ಕಡಲು ಕೊರೆತ ಪದೇ ಪದೇ ಉಂಟಾಗಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ದೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕು. ಕಡಲ ಬದಿಯಲ್ಲಿರುವ ಜನರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಮುಖ್ಯಮಂತ್ರಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. 

ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಚಟುವಟಿಕೆಗಳ ಕುರಿತ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು. 

ಕಡಲಕೊರೆತ ಸಂಭವಿಸುತ್ತಿದ್ದ ಪ್ರದೇಶಗಳಲ್ಲಿ ಈವರೆಗೆ 64.35 ಉದ್ದದ ತಡೆ ನಿರ್ಮಿಸಲಾಗಿದೆ. ಉದಯವಾರ, ಮರವಂತೆ, ಕೋಡಿಬೆಂಗ್ರೆ, ಸೋಮೇಶ್ವರ, ಮುಕ್ಕಚೆರ್ರಿ ಸೇರಿದಂತೆ ಒಟ್ಟು 12 ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಮತ್ತು ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು. 

ಉಳ್ಳಾಲ ಮತ್ತು ಉದಯವಾರದಲ್ಲಿ ತಡೆಗೋಡೆ ನಿರ್ಮಾಣವಾದ ಬಳಿಕ ಕಡಲಕೊರೆತ ಕಡಿಮೆಯಾಗಿದ್ದು ಮೀನುಗಾರಿಕಾ ಚಟುವಟಿಕೆಗಳು ಹೆಚ್ಚಾಗಿದೆ ಎಂದು ಇತ್ತೀಚೆಗೆ ಸ್ವಯಂಸೇವಾ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ವರದಿಯಾಗಿದೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. 
 

Trending News