ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಗೆ ಗರಂ ಆಗಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಖಂಡನೆ ವ್ಯಕ್ತಪಡಿಸಿದ್ದಾರೆ.
‘ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ’ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ರಾಷ್ಟ್ರಪತಿಯನ್ನು ಸಂಸತ್ ಉದ್ಘಾಟನೆಗೆ ಆಹ್ವಾನಿಸದೆ ಇರುವುದು ಸನಾತನಕ್ಕೆ ಉದಾಹರಣೆ- ಉದಯನಿಧಿ ಸ್ಟಾಲಿನ್
ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ @DrParameshwara ಅವರ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ.
ರಾಷ್ಟ್ರಗೀತೆಯ ಅಂತ್ಯದಲ್ಲಿ 'ಜೈ ಹಿಂದ್' ಎನ್ನುವ ಜಯಘೋಷ, ನಮ್ಮ ತಾಯ್ನೆಲ, ಇಲ್ಲಿನ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ,…
— B.S.Yediyurappa (@BSYBJP) September 6, 2023
‘ರಾಷ್ಟ್ರಗೀತೆಯ ಅಂತ್ಯದಲ್ಲಿ 'ಜೈ ಹಿಂದ್' ಎನ್ನುವ ಜಯಘೋಷ, ನಮ್ಮ ತಾಯ್ನೆಲ, ಇಲ್ಲಿನ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ರಾಷ್ಟ್ರಧರ್ಮ, ಜೀವನ ಪದ್ಧತಿಯ ಸಂಕೇತವಾಗಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಹೊಣೆಗೇಡಿತನದ ಮಾತುಗಳನ್ನಾಡಿ ಪರಮೇಶ್ವರ್ ಅವರು ತಮ್ಮ ಘನತೆಗೆ ತಾವೇ ಕುಂದು ತಂದುಕೊಂಡಿದ್ದಾರೆ’ ಎಂದು ಬಿಎಸ್‍ವೈ ಕುಟುಕಿದ್ದಾರೆ.
‘ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಘಾಸಿಯುಂಟು ಮಾಡುವ, ರಾಷ್ಟ್ರದ ಅಸ್ಮಿತೆಯಂತಹ ವಿಷಯಗಳ ಬಗ್ಗೆ ತಿಳಿದುಕೊಳ್ಳದೆ, ಹಗುರವಾಗಿ ಮಾತನಾಡುವುದು ಸರಿಯಲ್ಲ’ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಇದನ್ನೂ ಓದಿ: ಹೊಸ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಯವರನ್ನ ಆಹ್ವಾನಿಸಲಿಲ್ಲ : ಸನಾತನ ಜಾತಿ ತಾರತಮ್ಯಕ್ಕೆ ಅತ್ಯುತ್ತಮ ಉದಾಹರಣೆ
ತುಮಕೂರಿನ ಕೊರಟಗೆರೆಯಲ್ಲಿ ಮಾತನಾಡಿದ್ದ ಗೃಹ ಸಚಿವ ಡಾ.ಸಿ.ಪರಮೇಶ್ವರ್, ಹಿಂದೂ ಧರ್ಮ ಹುಟ್ಟಿದ್ದು ಯಾವಾಗ? ಯಾರು ಹುಟ್ಟಿಸಿದ್ರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.