ಕೊಲೊಂಬೋ: ಇಲ್ಲಿನ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕ್ ತಂಡದ ವಿರುದ್ಧ 356 ರನ್ ಗಳ ಬೃಹತ್ ಮೊತ್ತ ಗಳಿಸಿದೆ.
ಟಾಸ್ ಗೆದ್ದ ಪಾಕ್ ತಂಡವು ಟೀಮ್ ಇಂಡಿಯಾಗೆ ಬ್ಯಾಟಿಂಗ್ ಅವಕಾಶ ನೀಡಿತು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಟೀಮ್ ಇಂಡಿಯಾ ತಂಡವು ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಅವರ 121 ರನ್ ಗಳ ಮೊದಲ ವಿಕೆಟ್ ಜೊತೆಯಾಟ ತಂಡಕ್ಕೆ ಭದ್ರ ಬುನಾದಿಯನ್ನು ಹಾಕಿತು.ರೋಹಿತ್ ಶರ್ಮಾ 56, ರನ್ ಗಳಿಸಿದರೆ ಶುಬ್ಮನ್ ಗಿಲ್ 58 ರನ್ ಗಳಿಸಿದರು.
Virat Kohli 🤝 KL Rahul
The pair help India post a mammoth total against Pakistan in Colombo 👊 #AsiaCup2023 | #PAKvIND | https://t.co/qQxbB3eqQW pic.twitter.com/NRwhiaPy5s
— ICC (@ICC) September 11, 2023
ಇದನ್ನೂ ಓದಿ: "ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ತೊಂದರೆ ಇಲ್ಲ"
ಇದಾದ ನಂತರ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಕೆ.ಎಲ್ ರಾಹುಲ್ ಪಾಕ್ ತಂಡದ ಬೌಲರ್ ಗಳನ್ನು ಮನಬಂದಂತೆ ಥಳಿಸಿದರು.ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ ಮೂರು ಭರ್ಜರಿ ಸಿಕ್ಸರ್ ಹಾಗೂ 9 ಬೌಂಡರಿಗಳೊಂದಿಗೆ 122 ರನ್ ಗಳಿಸಿದರೆ ಕೆ.ಎಲ್.ರಾಹುಲ್ 106 ಎಸೆತಗಳಲ್ಲಿ 12 ಬೌಂಡರಿ ಹಾಗೂ ಎರಡು ಭರ್ಜರಿ ಸಿಕ್ಸರ್ ಗಳೊಂದಿಗೆ 111 ರನ್ ಗಳಿಸಿದರು.ಆ ಮೂಲಕ ಟೀಮ್ ಇಂಡಿಯಾ 50 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 356 ರನ್ ಗಳ ಬೃಹತ್ ಮೊತ್ತವನ್ನು ಪೂರೈಸಿತು.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕದಿನ ಪಂದ್ಯದಲ್ಲಿ 13000 ರನ್ ಗಳನ್ನು ವೇಗವಾಗಿ ಪೂರೈಸಿದ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.ಅಷ್ಟೇ ಅಲ್ಲದೆ 233 ಗಳ ಜೊತೆಯಾಟ ಕೊಹ್ಲಿ ಮತ್ತು ರಾಹುಲ್ ಅವರಿಂದ ಬಂದಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.