ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮಕ್ಕೆ ಚಾಲನೆ

ವಿಧಾನಸೌಧದ ಬ್ಯಾಂಕ್ಟೆಟ್‌ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 1 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮ ಹಾಗೂ 100 ಹೊಸ ಕರ್ನಾಟಕ ಪಬ್ಲಿಕ್ ‌ಶಾಲೆಗಳ ಪ್ರಾರಂಭ ಕಾರ್ಯಕ್ರಮಕ್ಕೆ ಚಾಲನೆ.

Last Updated : Jun 14, 2019, 01:53 PM IST
ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮಕ್ಕೆ ಚಾಲನೆ title=

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು 1000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮದ ವಿಭಾಗ ಹಾಗೂ 100 ಹೊಸ ಕೆ.ಪಿಎಸ್. ಶಾಲೆಗಳು  ಮತ್ತು ಪೂರ್ವ ಪ್ರಾಥಮಿಕ ಶಾಲೆಗಳ ಉದ್ಘಾಟನೆಯನ್ನು ನೆರವೇರಿಸಿದರು. 

ವಿಧಾನಸೌಧದ ಬ್ಯಾಂಕ್ಟೆಟ್‌ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 1 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮ ಹಾಗೂ 100 ಹೊಸ ಕರ್ನಾಟಕ ಪಬ್ಲಿಕ್ ‌ಶಾಲೆಗಳ ಪ್ರಾರಂಭ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಚಾಲನೆ ನೀಡಿದರು.

ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಬಸವರಾಜ ಹೊರಟ್ಟಿ, ಶಾಸಕರಾದ ಆರ್.ರೋಷನ್ ಬೇಗ್,  ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ: ಪಿ.ಸಿ.ಜಾಫರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಾ. ಜಿ. ಪರಮೇಶ್ವರ, ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮವನ್ನು ತೆರೆಯುತ್ತಿರುವುದರಿಂದ ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಯಾರೂ ಭಾವಿಸಬಾರದು ಎಂದು ಹೇಳಿದರು.

ಸರಕಾರಿ ಶಾಲೆ ಎಂದೂ ನಿರ್ಲಕ್ಷ್ಯ ಆಗಬಾರದು:
ಮಾತೃಭಾಷೆಯನ್ನು ರಕ್ಷಣೆ ಮಾಡುವ ಜೊತೆ ಜೊತೆಗೆ ಸರಕಾರಿ ಶಾಲೆಯಲ್ಲೂ ಆಂಗ್ಲ ಮಾಧ್ಯಮ ತೆರೆಯಲಾಗಿದೆ. ಪ್ರಸ್ತುತ ಸ್ಮರ್ಧಾತ್ಮಕ ಯುಗದಲ್ಲಿ ಆಂಗ್ಲ ಮಾಧ್ಯಮ ಅವಶ್ಯಕ.‌ ಸರಕಾರಿ ಶಾಲೆ ಬಗ್ಗೆ ನಿರ್ಲಕ್ಷ್ಯ ಬೇಡ. ನಾವೆಲ್ಲರೂ ಸಹ ಸರಕಾರಿ ಶಾಲೆಯಲ್ಲಿಯೇ ಶಿಕ್ಷಣ ಪಡೆದಿದ್ದು. ಗೊಲ್ಲಹಳ್ಳಿ ಎಂಬ ಹಳ್ಳಿಯ ಸರಕಾರಿ ಶಾಲೆಯಲ್ಲಿ ಓದಿದ ನಾನು ಆಸ್ಟ್ರೇಲಿಯಾದಲ್ಲಿ ಡಾಕ್ಟರೇಟ್‌ ಮಾಡಿದ್ದೇನೆ.‌ ಸರಕಾರಿ ಶಾಲೆ ಎಂದೂ ನಿರ್ಲಕ್ಷ್ಯ ಆಗಬಾರದು ಎಂದರು. 

ಇಡೀ ದೇಶದಲ್ಲಿ ಕರ್ನಾಟಕ ಶಿಕ್ಷಣದಲ್ಲಿ ಮಾದರಿ ರಾಜ್ಯ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ 
1200 ಕೋಟಿ ರೂ.ಗಳನ್ನು ಸರಕಾರಿ ಶಾಲೆಗಳ ಆಧುನೀಕರಣಕ್ಕೆ ಮೀಸಲಿಟ್ಟಿದೆ. ನಮ್ಮ‌ ಸರಕಾರದ ಆದ್ಯತೆ ಶಿಕ್ಷಣ ಕ್ಷೇತ್ರ ಎಂದು ಅವರು ಹೇಳಿದರು.

Trending News