ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷದ ಹೆಸರನ್ನು ಇನ್ಮುಂದೆ KD ಎಂದು ಬದಲಿಸಿಕೊಳ್ಳಲಿ ಎಂದು ಸಲಹೆ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಜೆಡಿಎಸ್ ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ. ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು’ ಎಂದು ಕುಟುಕಿದೆ.
‘ಜೆಡಿಎಸ್ ಕೇವಲ JD ಎಂದು ಇಟ್ಟುಕೊಳ್ಳಬಹುದು ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ! KD ಅಂದರೆ “ಕಮಲ ದಳ”! ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ, ಅಭಿನಂದನೆಗಳು’ ಎಂದು ಕಾಂಗ್ರೆಸ್ ಕುಟುಕಿದೆ.
ಜೆಡಿಎಸ್ ಇಂದು ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ,
ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು.
ಕೇವಲ JD ಎಂದು ಇಟ್ಟುಕೊಳ್ಳಬಹುದು ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ!
KD ಅಂದರೆ “ಕಮಲ ದಳ”!ಪಕ್ಷ ವಿಸರ್ಜಿಸುತ್ತೇನೆ ಎಂದವರು…
— Karnataka Congress (@INCKarnataka) September 22, 2023
ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ ನಡೆಸಿ ಆಕ್ರೋಶ ಹೊರಹಾಕಿದ ಕನ್ನಡಪರ ಸಂಘಟನೆಗಳು
‘ಬಿಜೆಪಿಯ ‘ಬಿ’ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ. ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ,
ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ.
ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ.
— Karnataka Congress (@INCKarnataka) September 22, 2023
‘ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತಾ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಇರುವ ಫೋಟೋ ಹಂಚಿಕೊಂಡಿರುವ ಕಾಂಗ್ರೆಸ್, ‘ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ? ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ? ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ಗಂಗಾವತಿ ನಗರಸಭೆ ವ್ಯಾಪ್ತಿಗೆ ಹಳ್ಳಿಗಳನ್ನು ಸೇರಿಸಲು ಮುಂದಾದ ಜಿಲ್ಲಾಡಳಿತ, ಗ್ರಾಮಸ್ಥರ ಆಕ್ರೋಶ
ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ?
ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ?
ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್… pic.twitter.com/nDdLx8a6JT
— Karnataka Congress (@INCKarnataka) September 22, 2023
ಕೇವಲ ಕುಟುಂಬದ ಹಿತಾಸಕ್ತಿಗಾಗಿ ಜಾತ್ಯಾತೀತತೆಯನ್ನು ವಿಸರ್ಜಿಸಿರುವ ಜೆಡಿಎಸ್ ತನ್ನ ಅಲ್ಪಸಂಖ್ಯಾತ ಮತದಾರರಿಗೆ ಏನೆಂದು ಉತ್ತರಿಸುತ್ತದೆ?
ಬಿಜೆಪಿಯ ಅಲ್ಪಸಂಖ್ಯಾತ ಹಾಗೂ ದಲಿತ ವಿರೋಧಿ ನೀತಿಗಳಿಗೆ ಜೆಡಿಎಸ್ ನ ಸಮ್ಮತಿಯೂ ಇದೆಯೇ?
ಹಿಂದೆ ಜೆಡಿಎಸ್ ಪಕ್ಷದಲ್ಲೇ ಇದ್ದ ಸಂಸದ ಡ್ಯಾನಿಷ್ ಅಲಿ ಅವರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿದ ಬಿಜೆಪಿ…
— Karnataka Congress (@INCKarnataka) September 23, 2023
‘ಕೇವಲ ಕುಟುಂಬದ ಹಿತಾಸಕ್ತಿಗಾಗಿ ಜಾತ್ಯಾತೀತತೆಯನ್ನು ವಿಸರ್ಜಿಸಿರುವ ಜೆಡಿಎಸ್ ತನ್ನ ಅಲ್ಪಸಂಖ್ಯಾತ ಮತದಾರರಿಗೆ ಏನೆಂದು ಉತ್ತರಿಸುತ್ತದೆ? ಬಿಜೆಪಿಯ ಅಲ್ಪಸಂಖ್ಯಾತ ಹಾಗೂ ದಲಿತ ವಿರೋಧಿ ನೀತಿಗಳಿಗೆ ಜೆಡಿಎಸ್‍ನ ಸಮ್ಮತಿಯೂ ಇದೆಯೇ? ಹಿಂದೆ ಜೆಡಿಎಸ್ ಪಕ್ಷದಲ್ಲೇ ಇದ್ದ ಸಂಸದ ಡ್ಯಾನಿಷ್ ಅಲಿ ಅವರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿದ ಬಿಜೆಪಿ ಸಂಸದನ ಮಾತನ್ನು ಜೆಡಿಎಸ್ ಕೂಡ ಅನುಮೋದಿಸುತ್ತದೆಯೇ? ಜಾತ್ಯಾತೀತ ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಯ್ತೆ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.