ಬೆಂಗಳೂರು: ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಾಂಗ್ರೆಸ್ ಸರಕಾರ ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ; ಕಾಂಗ್ರೆಸ್ ಪಕ್ಷವು ತಮಿಳುನಾಡಿನ ಡಿಎಂಕೆ ಪಕ್ಷದ ಬಿ ಟೀಂ ಎಂದು ಟಾಂಗ್ ನೀಡಿದ್ದಾರೆ ಅವರು.
ಕಾವೇರಿ ಹೋರಾಟವನ್ನು ಹತ್ತಿಕ್ಕುತ್ತಿರುವ ಸರಕಾರದ ಕ್ರಮವನ್ನು ಚೋದ್ಯ ಎಂದು ಟೀಕಿಸಿರುವ ಅವರು; ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿ ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ-ಲೋಕ ಕದನಕ್ಕೆ ಬಿಜೆಪಿ-ಜೆಡಿಎಸ್ ದೋಸ್ತಿ ದೋಸ್ತಿ
ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಎಂದು ಕೇಳಿದ್ದಾರೆ.
ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಯಾರಿಗೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.
ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಅರ್ಥವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.
ಇದನ್ನೂ ಓದಿ-ಶೇ.26-27ಕ್ಕೆ ಸಿಎಂ ಚಾಮರಾಜನಗರ ಭೇಟಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.