ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ನಾಗ್ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಈ ಎನ್ಕೌಂಟರ್ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಾಲ್ಹ್ಮಾ ಪ್ರದೇಶದ ಅನಂತ್ನಾಗ್ನ ಬಿನ್ ಭೀರಾದ ಬಿಹ್ಬೆರಾದಲ್ಲಿ ಮಂಗಳವಾರ ಬೆಳಿಗ್ಗೆ ಭಯೋತ್ಪಾದಕರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪದೆಯಿಂದಲೂ ಗುಂಡಿನ ದಾಳಿ ನಡೆದಿದ್ದು ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಈ ಪ್ರದೇಶದಲ್ಲಿ 2 ರಿಂದ 3 ಭಯೋತ್ಪಾದಕರು ಅಡಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಭದ್ರತಾ ಪಡೆ ಶೋಧ ಕಾರ್ಯವನ್ನು ಮುಂದುವರೆಸಿದೆ.
Jammu and Kashmir: Exchange of fire underway between security forces & terrorists in Anantnag. More details awaited. (Visuals deferred by unspecified time) pic.twitter.com/OjcRvbMNR5
— ANI (@ANI) June 18, 2019