ನವದೆಹಲಿ: ಕೋಲ್ಕತ್ತಾದ ಉತ್ತರಕ್ಕೆ ಇರುವ ಉತ್ತರ 24 ಪರಗಣ ಜಿಲ್ಲೆಯ ಭಟ್ಪಾರದಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತರ ನಡುವೆ ನಡೆದ ಘರ್ಷಣೆಯಲ್ಲಿ 17 ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಲ್ಲಲಾಯಿತು ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಪೊಲೀಸ್ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ ಮತ್ತು ಇತರ ಉನ್ನತ ಅಧಿಕಾರಿಗಳನ್ನು ಕರೆದು ತುರ್ತು ಸಭೆ ನಡೆಸಿದರು.
ವರದಿಗಳ ಪ್ರಕಾರ ನೂತನವಾಗಿ ನಿರ್ಮಿಸಲಾದ ಪೊಲೀಸ್ ಠಾಣೆ ಬಳಿ ಹಿಂಸಾಚಾರದಲ್ಲಿ ತೊಡಗಿದ ಬಣಗಳ ಸದಸ್ಯರು ಈ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ . ಈ ಠಾಣೆಯನ್ನು ಗುರುವಾರ ಉದ್ಘಾಟನೆ ಮಾಡಲು ನಿರ್ಧರಿಸಲಾಗಿತ್ತು ಎನ್ನಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟವರನ್ನು ರಂಬಾಬು ಶಾ ಎಂದು ಗುರುತಿಸಲಾಗಿದ್ದು ಪಾನಿ ಪುರಿ ಮಾರಾಟಗಾರರಾಗಿದ್ದರು ಎನ್ನಲಾಗಿದೆ. ಇನ್ನು ಗಾಯಗೊಂಡ ಮೂವರು ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈಗ ಈ ಪ್ರದೇಶದಲ್ಲಿ ಆರ್ಎಎಫ್ ಸಿಬ್ಬಂದಿಯೊಂದಿಗೆ ಪೊಲೀಸ್ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದ್ದು, ಅಂಗಡಿಗಳು, ಮಾರುಕಟ್ಟೆ ಸ್ಥಳಗಳು ಮತ್ತು ವ್ಯಾಪಾರ ಅಂಗಡಿಗಳನ್ನು ಈ ಘಟನೆ ಹಿನ್ನಲೆಯಲ್ಲಿ ಈಗ ಮುಚ್ಚಲಾಗಿದೆ. ಮೇ 19 ರಿಂದ ವಿಧಾನಸಭಾ ಉಪಚುನಾವಣೆ ನಡೆದ ಹಿನ್ನಲೆಯಲ್ಲಿ ಭಟ್ಪರಾ ಸರಣಿ ಘರ್ಷಣೆಗಳಿಗೆ ಸಾಕ್ಷಿಯಾಗಿದೆ.