BJP vs Congress: ಹಿಂದೆ ತಮ್ಮ ಸರ್ಕಾರವನ್ನು ಕೆಡವಲು ಕಾಂಗ್ರೆಸ್ ಅನುಸರಿಸಿದ್ದ ಅದೇ ಪೋಸ್ಟರ್ ಅಭಿಯಾನವನ್ನೇ ಈಗ ತಿರುಗುಬಾಣ ಮಾಡಿದೆ. ಬಿಜೆಪಿ ಪೋಸ್ಟರ್ ಅಭಿಯಾನಕ್ಕೆ ಕಾಂಗ್ರೆಸ್ ಪೋಸ್ಟ್ ವಾರ್ ಸ್ಟೈಲ್ ನಲ್ಲೇ ಟಾಂಗ್ ಕೊಟ್ಟಿದೆ....
ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷ ಬಿಜೆಪಿ ನಡುವೆ IT ರೈಡ್ ಝಣ-ಝಣ ಕಾಂಚಾಣ ಪಾಲಿಟಿಕ್ಸ್ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆಯುತ್ತಿದೆ. ಇಷ್ಟು ದಿನ ಕಾಂಗ್ರೆಸ್ ಹೈಕಮಾಂಡ್ ಮೇಲೆ ಆರೋಪಗಳ ಸುರಿಮಳೆ ಮಾಡುತ್ತಿದ್ದ ಕೇಸರಿ ನಾಯಕರು ತಮಗೆ ಸಿಕ್ಕಿರೋ ಬ್ರಹ್ಮಾಸ್ತ್ರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಮಾಸ್ಟರ್ ಪ್ಲಾನ್ ಮಾಡಿದೆ.
ಇದನ್ನೂ ಓದಿ-ಜಿನ್ನಾ ಜೀನ್ಸಿನ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್, ಬಿಜೆಪಿ ಭಯ ಶುರುವಾಗಿದೆ..!
ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮಾಡಿದ್ದ ಪೇ ಸಿಎಂ ಅಭಿಯಾನವನ್ನೇ ಕಾಫಿ ಪೇಸ್ಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ATM ಸರ್ಕಾರದ ಕಲೆಕ್ಷನ್ ವಂಶಾವಳಿ ಎಂಬ ರೂಟ್ ಮ್ಯಾಪ್ ಪೋಸ್ಟರ್ ಬಿಡುಗಡೆ ಮಾಡೊ ಮೂಲಕ ಕೈ ಪಡೆ ಟಾಂಟ್ ಕೊಟ್ಟಿದೆ ಕೇಸರಿ ಟೀಂ....
ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಪೋಸ್ಟೃರ್ ಬಿಡುಗಡೆ ಮಾಡಿದ ಮಾಜಿ ಸಿಎಂ ಡಿ ವಿ ಸದಾನಂದಗೌಡ ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದರು. ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬ್ರ್ಯಾಂಡ್ ಸಿಎಂ, ಬ್ರ್ಯಾಂಡ್ ಡಿಸಿಎಂ ಹೇಗೆ ಮಾಡಬೇಕೆಂಬುದಕ್ಕೆ ರಾಜ್ಯಾಡಳಿತದ ಎಟಿಎಂ ಸರಕಾರವೇ ದೊಡ್ಡ ಉದಾಹರಣೆ.
ಇದು ಕಲೆಕ್ಷನ್ ಸರ್ಕಾರ . ದೆಹಲಿ ಕಮಿಷನ್ ಕಲೆಕ್ಷನ್ ನ ಕೇಂದ್ರ ಬಿಂದು ರಾಹುಲ್ ಗಾಂಧಿ ಇದರ ಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್‍ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ-"ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ" -ಸಿಎಂ ಸಿದ್ದರಾಮಯ್ಯ ಕಿಡಿ
ಸರ್ಕಾರದ ವಿರುದ್ಧ ಕಲೆಕ್ಷನ್ ಟ್ರೀ ಬಿಡುಗಡೆ ಮಾಡಿದ ಸದಾನಂದಗೌಡ ಅಲ್ಲಿನ ಕಾರ್ಯ ವೈಖರಿ ಬಗ್ಗೆ ವಾಗ್ದಾಳಿ ನಡೆಸಿದ್ರು. ರಾಷ್ಟ್ರೀಯ ಕಾಂಗ್ರೆಸ್ಸಿನ ಕಲೆಕ್ಷನ್ ನೇತೃತ್ವವನ್ನು ಸುರ್ಜೇವಾಲಾ, ವೇಣುಗೋಪಾಲ್ ವಹಿಸಿದ್ದಾರೆ. ಲೂಟಿ ಹೊಡೆಯುವ ಕಾರ್ಯಯೋಜನೆ ಅಚ್ಚರಿ ತರುವಂತಿದೆ ಎಂದು ವ್ಯಂಗ್ಯವಾಗಿಡಿದ್ರು.
ಸಿದ್ದರಾಮಯ್ಯರ ಹಣ ಸಂಗ್ರಹ ಅವರ ಮಗ ಯತೀಂದ್ರ ಮತ್ತು ಸ್ವಜಾತಿಯ ಬೈರತಿ ಸುರೇಶ್ ಮೂಲಕ ನಡೆಯುತ್ತದೆ. ಗುತ್ತಿಗೆದಾರರಲ್ಲೂ 2 ಗುಂಪುಗಳಾಗಿವೆ ಕೆಂಪಣ್ಣ, ಸಿದ್ದರಾಮಯ್ಯರ ಗುಂಪು. ಇನ್ನೊಂದೆಡೆ ತಂಡ ದೊಡ್ಡದಿದೆ ಉಪಾಧ್ಯಕ್ಷ ಅಂಬಿಕಾಪತಿ ನೇತೃತ್ವದ ತಂಡವಿದ್ದು. ಅವರ ಮನೆಯಲ್ಲೇ ಹಣ ಸಿಕ್ಕಿದೆ ಪ್ರದೀಪ್, ಪ್ರಹ್ಲಾದ್, ಪ್ರಮೋದ್ ನೇತೃತ್ವದಲ್ಲಿ ಹಣ ಸಂಗ್ರಹ ನಡೆದಿದೆ. ಇವೆಲ್ಲವೂ ರಾಹುಲ್ ಗಾಂಧಿಯವರಿಗೆ ಹೋಗುತ್ತದೆ ಎಂದು ಆರೋಪಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.