ಮುಂಬೈ: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಬಾಂಗ್ಲಾದೇಶದ ವಿರುದ್ಧ 149 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ ತಂಡಕ್ಕೆ ಆರಂಭದಲ್ಲಿಯೇ ಆಘಾತ ಎದುರಿಸಿತು, ತಂಡದ ಮೊತ್ತ 36 ಆಗುವಷ್ಟರಲ್ಲಿ ರೀಜಾ ಹೆಂಡ್ರಿಕ್ಸ್, ವಾನ್ ಡೆರ್ ಡಸ್ಸೆನ್ ಅವರ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.ಈ ಸಂದರ್ಭದಲ್ಲಿ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ 174 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು, ಇದರ ಹೊರತಾಗಿ ಕ್ಲಾಸೆನ್ ಕೂಡ 90 ರನ್ ಗಳಿಸಿದರು. ಆ ಮೂಲಕ ದಕ್ಷಿಣ ಆಫ್ರಿಕಾ ತಂಡವು 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 382 ರನ್ಗಳನ್ನು ಗಳಿಸಿತು.
A stupendous 174 helps Quinton de Kock garner his second @aramco #POTM of #CWC23 🎇#SAvBAN pic.twitter.com/iDYuhawehD
— ICC (@ICC) October 24, 2023
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶ ತಂಡದಲ್ಲಿ ಮೋಹಮ್ಮುದುಲ್ಲ ಅವರ 111 ರನ್ ಗಳ ಇನಿಂಗ್ಸ್ ಬಿಟ್ಟರೆ ಉಳಿದ ಯಾವ ಆಟಗಾರನು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ ಹೀಗಾಗಿ ಅಂತಿಮವಾಗಿ ಬಾಂಗ್ಲಾದೇಶವು 46.4 ಓವರ್ ಗಳಲ್ಲಿ ಸರ್ವಪತವನ್ನು ಕಂಡಿತು.ದಕ್ಷಿಣ ಆಫ್ರಿಕಾದ ಪರವಾಗಿ ಜೆರಾಲ್ಡ್ ಕೋಟ್ಜಿ ,ಮೂರು ವಿಕೆಟ್ ಗಳನ್ನು ಪಡೆಯುವ ಮೂಲಕ ಮಿಂಚಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.