ಬೆಂಗಳೂರು: ಇತ್ತೀಚೆಗಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಪದವಿ ತ್ಯಜಿಸಿದ ಹಳ್ಳಿ ಹಕ್ಕಿ ಹೆಚ್.ವಿಶ್ವನಾಥ್ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಪದವಿಗೆ ರಾಜೀನಾಮೆ ನೀಡಿದ್ದ ಶಾಸಕ ಹೆಚ್.ವಿಶ್ವನಾಥ್ ಅವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ತಮಗೆ ಸಿಕ್ಕ ಅಧ್ಯಕ್ಷ ಹುದ್ದೆಯನ್ನು ಸರಿಯಾಗಿ 6 ತಿಂಗಳು ಕೂಡ ನಿಭಾಯಿಸಲಾಗದೆ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿರುವ ಹೆಚ್.ವಿಶ್ವನಾಥ್ ಅವರು ಸದಾ ಇತರರ ಸಾಮರ್ಥ್ಯವನ್ನು ಪ್ರಶ್ನಿಸುತ್ತ ತಮ್ಮ ದೌರ್ಬಲ್ಯವನ್ನು ಮರೆಮಾಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ಅವರ ಬಗ್ಗೆ ನನಗೆ ಅನುಕಂಪವಿದೆ ಎಂದಿದ್ದಾರೆ.
ತಮಗೆ ಸಿಕ್ಕ ಅಧ್ಯಕ್ಷ ಹುದ್ದೆಯನ್ನು ಸರಿಯಾಗಿ 6 ತಿಂಗಳು ಕೂಡ ನಿಭಾಯಿಸಲಾಗದೆ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿರುವ ಹೆಚ್.ವಿಶ್ವನಾಥ್ ಅವರು ಸದಾ ಇತರರ ಸಾಮರ್ಥ್ಯವನ್ನು ಪ್ರಶ್ನಿಸುತ್ತ ತಮ್ಮ ದೌರ್ಬಲ್ಯವನ್ನು ಮರೆಮಾಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ಅವರ ಬಗ್ಗೆ ನನಗೆ ಅನುಕಂಪವಿದೆ.— Siddaramaiah (@siddaramaiah) July 4, 2019
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್. ವಿಶ್ವನಾಥ್ ಇಬ್ಬರೂ ಆಗಾಗ್ಗೆ ಒಬ್ಬರ ಮೇಲೆ ಮತ್ತೊಬ್ಬರು ಹರಿಹಾಯುತ್ತಲೇ ಇರುತ್ತಾರೆ. ಇತ್ತೀಚಿಗೆ ಶಾಸಕ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಹೆಚ್. ವಿಶ್ವನಾಥ್ ರೋಷನ್ ಬೇಗ್ ಅವರನ್ನು ಪಕ್ಷ (ಕಾಂಗ್ರೆಸ್) ಅಮಾನತುಗೊಳಿಸಿರುವುದಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ನಾನು ಕಾಂಗ್ರೆಸ್ನಲ್ಲೇ ಇದ್ದಿದ್ದರೆ ಸಿದ್ದರಾಮಯ್ಯ ಅವರು ನನಗೂ ಅದೇ ರೀತಿ ಮಾಡುತ್ತಿದ್ದರು ಎಂದೂ ಕೂಡ ಹೇಳಿಕೆ ನೀಡಿದ್ದರು.
ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿರುವುದು ಸಿದ್ದರಾಮಯ್ಯ ಅವರ ವೈಯಕ್ತಿಕ ಪ್ರತೀಕಾರ ಅವರು ಒಳ್ಳೆಯ ರಾಜಕಾರಣಿಯಲ್ಲ ಎಂದೂ ಕೂಡ ವಾಗ್ದಾಳಿ ನಡೆಸಿದ್ದರು.
Former JDS Karnataka president, H Vishwanath: This is personal vindictiveness of Siddaramaiah, he is not good in politics. Roshan Baig was suspended by the party (Congress), Siddaramaiah would have done the same to me if i was in Congress. pic.twitter.com/xYgecUxb5r
— ANI (@ANI) June 20, 2019