ಬೆಂಗಳೂರು : ಇಷ್ಟು ದಿನ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ಹೈಕಮಾಂಡ್ ಸಾರಥಿಯನ್ನು ನೇಮಕ ಮಾಡಿದೆ. ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರನ್ನಾಗಿ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ @BYVijayendra ಅವರಿಗೆ ಅಭಿನಂದನೆಗಳು.
ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಿಷ್ಠಗೊಳ್ಳಲಿದೆ.#BJP4Karnataka pic.twitter.com/Vcq7du9bkQ
— BJP Karnataka (@BJP4Karnataka) November 10, 2023
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ನಳೀನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಿದ್ದರು. ಬಳಿಕ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಬಿದ್ದಿತ್ತು. ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷ ಕಮಲಪಾಳಯದ ವಿರುದ್ಧ ಆಗಾಗ ವ್ಯಂಗ್ಯವಾಡುತ್ತಿತ್ತು.
ಅಲ್ಲದೆ, ಈ ಸ್ಥಾನಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಬಲವಾಗಿ ಕೇಳಿ ಬಂದಿತ್ತು. ಅಲ್ಲದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಸೇರಿದಂತೆ ಹಲವರ ಹೆಸರು ಮುಂಚೂಣಿಯಲ್ಲಿತ್ತು. ಆದ್ರೆ ಬಿಜೆಪಿ ಹೈಕಮಾಂಡ್ ಏಕಾಎಕಿ ಬಿಎಸ್‌ವೈ ಪುತ್ರನಿಗೆ ರಾಜ್ಯ ಬಿಜೆಪಿ ಸಾರಥಿಯನ್ನಾಗಿ ಮಾಡಿ ಅಚ್ಚರಿ ಮೂಡಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.