CM Yogi Adityanath announced to give free gas cylinders on Holi: ಉತ್ತರ ಪ್ರದೇಶದ ಯೋಗಿ ಸರ್ಕಾರವು ರಾಜ್ಯದ ಮಹಿಳೆಯರಿಗೆ ದೀಪಾವಳಿ ಉಡುಗೊರೆಯನ್ನು ನೀಡುವ ಸಂದರ್ಭದಲ್ಲಿ, ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಈ ಘೋಷಣೆ ಹೊರಬಿದ್ದ ಕೂಡಲೇ ರಾಜ್ಯದ ಮಹಿಳೆಯರ ಮುಖದಲ್ಲಿ ಸಂತಸದ ಅಲೆ ಹರಿದಂತಿದೆ.
ಧನ್ತೇರಸ್ ಸಂದರ್ಭದಲ್ಲಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಲಕ್ನೋದ ಲೋಕಭವನದಲ್ಲಿ ರಾಜ್ಯದ 1.75 ಕೋಟಿ ಅರ್ಹ ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಎಲ್ ಪಿ ಜಿ ಸಿಲಿಂಡರ್ ಮರುಪೂರಣ ವಿತರಣಾ ಅಭಿಯಾನವನ್ನು ಪ್ರಾರಂಭಿಸಿದರು. ಇದೇ ವೇಳೆ, ದೀಪಾವಳಿ ಮಾತ್ರವಲ್ಲದೆ ಹೋಳಿ ಹಬ್ಬದಂದು ಸಹ ಎಲ್ಲಾ ಅರ್ಹ ಮಹಿಳೆಯರಿಗೆ ಸರ್ಕಾರದಿಂದ ಗ್ಯಾಸ್ ಸಿಲಿಂಡರ್ ನೀಡಲಾಗುವುದು ಎಂದು ಹೇಳಿದರು. ಈ ವೇಳೆ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಸಮಾಜವಾದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಶುಕ್ರವಾರ ಲೋಕಭವನದಲ್ಲಿ ಆಯೋಜಿಸಿದ್ದ ಎಲ್’ಪಿಜಿ ಸಿಲಿಂಡರ್ ರೀಫಿಲ್ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಯೋಗಿ, “2022ರ ವಿಧಾನಸಭಾ ಚುನಾವಣೆ ವೇಳೆ ಲೋಕ ಕಲ್ಯಾಣ ಸಂಕಲ್ಪ ಪತ್ರದಲ್ಲಿ ಮಾಡಿದ ಮತ್ತೊಂದು ಘೋಷಣೆಯನ್ನು ನಮ್ಮ ಸರ್ಕಾರ ಈಡೇರಿಸಲು ಆರಂಭಿಸಿದೆ. 2014ಕ್ಕಿಂತ ಮೊದಲು ಉತ್ತರ ಪ್ರದೇಶದ ಜನರಿಗೆ ಗ್ಯಾಸ್ ಸಂಪರ್ಕ ಸಿಗುತ್ತಿರಲಿಲ್ಲ. ಅಪ್ಪಿತಪ್ಪಿಯೂ ಸಂಪರ್ಕ ಪಡೆದರೂ ಗ್ಯಾಸ್ ಸಂಪರ್ಕಕ್ಕಾಗಿ ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಗ್ಯಾಸ್ ಕನೆಕ್ಷನ್ ಪಡೆಯಲು ಸರದಿ ಸಾಲಿನಲ್ಲಿ ನಿಂತವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುವಂತೆ ಒತ್ತಾಯಿಸಿದ ಘಟನೆಗಳು ಸಾಕಷ್ಟು ನಡೆದಿವೆ. ಅಷ್ಟೇ ಅಲ್ಲ, ರಾಜ್ಯದ ಬಡವರು ಮತ್ತು ವಂಚಿತ ವರ್ಗದವರು ಗ್ಯಾಸ್ ಸಂಪರ್ಕ ಪಡೆಯುವ ಬಗ್ಗೆ ಯೋಚಿಸಲೂ ಸಾಧ್ಯವಾಗಿರಲಿಲ್ಲ” ಎಂದಿದ್ದರು.
ಇದನ್ನೂ ಓದಿ: ವಿಶ್ವಕಪ್ ಮಧ್ಯೆ ಕ್ಯಾಪ್ಟನ್ಸಿ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದು ಹೀಗೆ…
ಸದ್ಯ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಕಾರ್ಯಕ್ರಮದಲ್ಲಿ ಸಿಎಂ ಯೋಗಿ ಅವರು ದೀಪಾವಳಿ ಮಾತ್ರವಲ್ಲದೆ ಮಾರ್ಚ್‌ನಲ್ಲಿ ಹೋಳಿ ಹಬ್ಬದಂದು ರಾಜ್ಯ ಸರ್ಕಾರ ಮತ್ತೊಮ್ಮೆ ಉಚಿತ ಗ್ಯಾಸ್ ಸಿಲಿಂಡರ್ ನೀಡಲಿದೆ ಎಂದು ಘೋಷಿಸಿದ್ದಾರೆ. ಇದರೊಂದಿಗೆ ಮಾಹಿತಿ ನೀಡಿದ ಅವರು, ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್’ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.