ಚಳಿಗಾಲದಲ್ಲಿ ಅಗ್ಗದ ಬೆಲೆಗೆ ಸಿಗುವ ತರಕಾರಿಗಳು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಸಹಾಯವಾಗುತ್ತದೆ.
ಬೆಂಗಳೂರು : ಚಳಿಗಾಲದಲ್ಲಿ ನಾವು ಸೇವಿಸುವ ಹೆಚ್ಚಿನ ಆಹಾರಗಳು ಮಧುಮೇಹ ರೋಗಿಗಳಿಗೆ ಒಳ್ಳೆಯದಲ್ಲ. ಚಳಿಗಾಲದಲ್ಲಿ, ಜನರು ಹೆಚ್ಚಾಗಿ ಕೊಬ್ಬಿನ ಅಥವಾ ಹೆಚ್ಚಿನ ಸಕ್ಕರೆ ಅಂಶ ಇರುವ ಆಹಾರವನ್ನು ಸೇವಿಸುತ್ತಾರೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ ಚಳಿಗಾಲದಲ್ಲಿ ಮಧುಮೇಹವನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಆದರೂ ಚಳಿಗಾಲದಲ್ಲಿ, ಸಿಗುವ ಕೆಲವು ವಸ್ತುಗಳು ರಕ್ತದ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಚಳಿಗಾಲದಲ್ಲಿ ದೊರೆಯುವ ಅಗ್ಗದ ತರಕಾರಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಚಳಿಗಾಲದಲ್ಲಿ ಅಗ್ಗದ ದರದಲ್ಲಿ ದೊರೆಯುವ ತರಕಾರಿಗಳಲ್ಲಿ ಬಟಾಣಿ ಕೂಡಾ ಒಂದು. ಇದು ಮಧುಮೇಹ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ. ಬಟಾಣಿ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಕೆಲವರು ಭಾವಿಸುತ್ತಾರೆ. ಆದರೆ ಇದು ನಿಜವಲ್ಲ. ಅದರಲ್ಲಿ ಕಂಡುಬರುವ ಕೆಲವು ಅಂಶಗಳು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಚಳಿಗಾಲದಲ್ಲಿ ಹೇರಳವಾಗಿ ಸಿಗುವ ಮೂಲಂಗಿಯು ಮಧುಮೇಹ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ. ಸಾಂಬಾರ್, ಪಲ್ಯ ಸಲಾಡ್ ರೂಪದಲ್ಲಿ ಮೂಲಂಗಿಯನ್ನು ಸೇವಿಸಬಹುದು. ಇದು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳನ್ನು ದೂರವಿರಿಸಲು ಸಹಾಯ ಮಾಡುತ್ತದೆ.
ಮಧುಮೇಹಿಗಳಿಗೆ ಕ್ಯಾರೆಟ್ ಸೇವನೆ ಒಳ್ಳೆಯದಲ್ಲ ಎನ್ನುವುದೇ ಸಾಮಾನ್ಯವಾಗಿ ಇರುವ ಮನಸ್ಥಿತಿ. ಆದರೆ ಮಧುಮೇಹ ರೋಗಿಗಳು ಕ್ಯಾರೆಟ್ ಅನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸಬಹುದು. ಇದು ಮಧುಮೇಹದಿಂದ ಉಂಟಾಗುವ ಅನೇಕ ತೊಡಕುಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಮೆಂತ್ಯೆ ಸೊಪ್ಪನ್ನು ಬಳಸಬಹುದು. ಮೆಂತ್ಯೆ ಬೀಜಗಳು ಅಥವಾ ಸೊಪ್ಪು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿವೆ. ಚಳಿಗಾಲದಲ್ಲಿ ಮೆಂತ್ಯೆ ಸೊಪ್ಪು ಕಡಿಮೆ ಬೆಲೆಗೆ ಸಿಗುತ್ತದೆ.
ಪಾಲಕ್ ಸೊಪ್ಪನ್ನು ಎಲ್ಲಾ ಋತುವಿನಲ್ಲಿ ತಿನ್ನಬಹುದು. ಆದರೆ ಚಳಿಗಾಲದಲ್ಲಿ ಇದನ್ನೂ ಹೆಚ್ಚಾಗಿ ಬೆಳೆಯಲಾಗುತ್ತದೆ. ಆದ್ದರಿಂದ ಈ ಋತುವಿನಲ್ಲಿ ಅದರ ಬೆಲೆ ಕೂಡ ಕಡಿಮೆಯಾಗುತ್ತದೆ. ಪಾಲಕ್ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.