ಬೆಳಗಿನ ಉಪಾಹಾರದಲ್ಲಿ ಕೆಲವು ಪದಾರ್ಥಗಳನ್ನು ತಿನ್ನುವುದರಿಂದ ತೂಕ ಇಳಿಕೆ ಸಾಧ್ಯವಾಗುತ್ತದೆ. ಅಲ್ಲದೆ ಈ ಆಹಾರಗಳು ದೇಹಕ್ಕೆ ಅಗತ್ಯವಾಗಿರುವ ಪೋಷಕಾಂಶವನ್ನು ಕೂಡಾ ನೀಡುತ್ತದೆ.
ಬೆಂಗಳೂರು : ತೂಕ ಇಳಿಸಿಕೊಳ್ಳಲು ಆಹಾರಕ್ರಮದಿಂದ ಹಿಡಿದು, ಜಿಮ್ನಲ್ಲಿ ಗಂಟೆಗಳ ಕಾಲ ವ್ಯಾಯಾಮ ಮಾಡುವವರೆಗೆ, ಅನೇಕ ಪ್ರಯತ್ನಗಳನ್ನು ಮಾಡಲಾಗುತ್ತದೆ. ಕೆಲವರು ತೂಕ ಇಳಿಸಿಕೊಳ್ಳುವುದಕ್ಕಾಗಿ ಬೆಳಗಿನ ಉಪಾಹಾರವನ್ನು ತ್ಯಜಿಸುತ್ತಾರೆ. ಆದರೆ, ಬೆಳಗಿನ ಉಪಾಹಾರವನ್ನು ತ್ಯಜಿಸುವುದರಿಂದ ತೂಕ ಕಡಿಮೆಯಾಗುವುದಿಲ್ಲ, ಬದಲಿಗೆ ತೂಕ ಹೆಚ್ಚಾಗುವ ಅಪಾಯವಿರುತ್ತದೆ. ಆದರೆ ಬೆಳಗಿನ ಉಪಾಹಾರದಲ್ಲಿ ಕೆಲವು ಪದಾರ್ಥಗಳನ್ನು ತಿನ್ನುವುದರಿಂದ ತೂಕ ಇಳಿಕೆ ಸಾಧ್ಯವಾಗುತ್ತದೆ. ಅಲ್ಲದೆ, ಈ ಆಹಾರಗಳು ದೇಹಕ್ಕೆ ಅಗತ್ಯವಾಗಿರುವ ಪೋಷಕಾಂಶವನ್ನು ಕೂಡಾ ನೀಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ತೂಕ ಇಳಿಸಿಕೊಳ್ಳಬೇಕಾದರೆ ಬೆಳಗಿನ ಉಪಾಹಾರಕ್ಕಾಗಿ ಅವಲಕ್ಕಿ ಸೇವಿಸಬೇಕು. ಇದು ತಿನ್ನಲು ತುಂಬಾ ಹಗುರ ಮತ್ತು ಜೀರ್ಣಿಸಿಕೊಳ್ಳಲು ಸುಲಭ. ಅವಲಕ್ಕಿಯ ಪೌಷ್ಟಿಕಾಂಶ ಹೆಚ್ಚಿಸಲು, ಅದಕ್ಕೆ ಸಾಕಷ್ಟು ತರಕಾರಿಗಳನ್ನು ಸೇರಿಸಬಹುದು. ಇದನ್ನು ತಿನ್ನುವುದರಿಂದ ನಿಮ್ಮ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿರುತ್ತದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
ಪೌಷ್ಟಿಕಾಂಶ-ಭರಿತ ಹೆಸರು ಬೇಳೆ ದೋಸೆ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದರಲ್ಲಿ ಫೈಬರ್ ಮತ್ತು ಪ್ರೊಟೀನ್ ಹೇರಳವಾಗಿ ಕಂಡು ಬರುತ್ತದೆ. ಹೆಸರು ಬೇಳೆ ದೋಸೆ ತಯಾರಿಸುವಾಗ ಅದಕ್ಕೆ ತರಕಾರಿಗಳು ಮತ್ತು ಚೀಸ್ ಸೇರಿಸಬಹುದು.
ಪ್ರೋಟೀನ್ ಭರಿತ ಮೊಟ್ಟೆಯು ತೂಕ ಇಳಿಸಲು ಸಹಾಯ ಮಾಡುತ್ತದೆ. ಬೆಳಗಿನ ಉಪಾಹಾರದಲ್ಲಿ ಬೇಯಿಸಿದ ಮೊಟ್ಟೆ, ಮೊಟ್ಟೆ ಸ್ಯಾಂಡ್ವಿಚ್, ಆಮ್ಲೆಟ್ ಅಥವಾ ಎಗ್ ಭುರ್ಜಿಯನ್ನು ಸೇವಿಸಬಹುದು. ಬೆಳಗಿನ ಉಪಾಹಾರಕ್ಕಾಗಿ ಮೊಟ್ಟೆ ತಿನ್ನುವುದು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ಓಟ್ಸ್ ಫೈಬರ್ ನಲ್ಲಿ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಮಾತ್ರವಲ್ಲದೆ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಇದನ್ನು ತಿನ್ನುವುದರಿಂದ ಹೊಟ್ಟೆ ತುಂಬಾ ಹೊತ್ತು ತುಂಬಿರುತ್ತದೆ ಮತ್ತು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕಡಿಮೆ ಕೊಬ್ಬಿನ ಹಾಲು, ಕೆಲವು ಹಣ್ಣುಗಳು ಮತ್ತು ಬೀಜಗಳನ್ನು ಸೇರಿಸುವ ಮೂಲಕ ಓಟ್ಸ್ ಅನ್ನು ತಿನ್ನಬಹುದು.
ತೂಕ ಇಳಿಸಿಕೊಳ್ಳಲು ಬಯಸಿದರೆ, ಇಡ್ಲಿ ಕೂಡಾ ಉತ್ತಮ ಆಯ್ಕೆಯಾಗಿದೆ. ಇದು ಜೀವಸತ್ವಗಳು, ಫೈಬರ್ ಮತ್ತು ಖನಿಜಗಳನ್ನು ಹೇರಳವಾಗಿ ಹೊಂದಿರುತ್ತದೆ. ಇದನ್ನು ಜೀರ್ಣಿಸಿಕೊಳ್ಳುವುದು ಸುಲಭ. ಇಡ್ಲಿಯನ್ನು ಹೆಚ್ಚು ಆರೋಗ್ಯಕರವಾಗಿಸಲು, ನೀವು ಅದಕ್ಕೆ ಕ್ಯಾರೆಟ್, ಕ್ಯಾಪ್ಸಿಕಂ, ಈರುಳ್ಳಿ ಮತ್ತು ಟೊಮೆಟೊದಂತಹ ತರಕಾರಿಗಳನ್ನು ಸೇರಿಸಬಹುದು.