ಕೊಪ್ಪಳ : ಬಿಜೆಪಿಯವರು ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗ್ಯಾರಂಟಿ ಯೋಜನೆಗಳನ್ನು ದ್ವೇಷಿಸಿದವರಿಂದಲೇ ಗ್ಯಾರಂಟಿ ಯೋಜನೆ:
ಕೊಪ್ಪಳದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಲ್ಲಿ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ, ಪಿಎಂ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಅಷ್ಟೇ ಅಲ್ಲದೆ, ಬಿಜೆಪಿಯವರು ಬಹಳ ವರ್ಷಗಳಿಂದ ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿದ್ದರೂ, ಯಾವ ಪ್ರಗತಿಯನ್ನೂ ಸಾಧಿಸಿಲ್ಲ. ಈಗ ಪ್ರಗತಿ ಸಾಧಿಸುವುದಾಗಿ ಭರವಸೆಗಳನ್ನು ನೀಡುತ್ತಿದ್ದಾರೆ. ಅವರ ಮಾತುಗಳನ್ನು ಜನರು ನಂಬುವುದಿಲ್ಲ ಎಂದರು.
ಇದನ್ನೂ ಓದಿ- ಮುರುಘಾ ಶ್ರೀಗಳಿಗೆ ಮತ್ತೆ ಸಂಕಷ್ಟ
ಕುಮಾರಸ್ವಾಮಿಯವರು ಆರೋಪಿಸಲು ನೈತಿಕತೆ ಇಲ್ಲ :
ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ವಿದ್ಯುತ್ ಕಳ್ಳತನ ಎಸಗಿ ದಂಡ ಕಟ್ಟಿರುವ ಕುಮಾರಸ್ವಾಮಿಯವರಿಗೆ ನಮ್ಮನ್ನು ಅಪೇಕ್ಷಿಸಲು ಯಾವ ನೈತಿಕತೆಯೂ ಇಲ್ಲ ಎಂದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಯತೀಂದ್ರರವರು ದುಡ್ಡಿನ ವ್ಯವಹಾರದ ಬಗ್ಗೆ ಮಾತನಾಡಿದ್ದಾರೆಯೇ , ಅವರ ಬಳಿ ಏನಾದರೂ ಪುರಾವೆ ಇದೆಯೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ- ಸಿಎಂ ಸಿದ್ದರಾಮಯ್ಯ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆ
ಯತೀಂದ್ರರವರು ಸಿಎಸ್ ಆರ್ ಫಂಡ್ ಬಗ್ಗೆ ಮಾತನಾಡಿದ್ದರೆ, ಅದನ್ನು ತಿರುಚಿ ವರ್ಗಾವಣೆ ಬಗ್ಗೆ ಮಾತನಾಡಿದ್ದಾರೆ ಎಂದು ಆರೋಪಿಸುತ್ತಾರೆ. ಕುಮಾರಸ್ವಾಮಿಯವರ ಕಾಲದಲ್ಲಿ ವರ್ಗಾವಣೆಗಳ ಮೂಲಕ ದುಡ್ಡು ಮಾಡಿರುವುದು ಜಗಜ್ಜಾಹೀರವಾಗಿದೆ. ಅವರು ನಮ್ಮ ವಿರುದ್ದ ಆರೋಪಗಳನ್ನು ಮಾಡುವ ನೈತಿಕತೆ ಇಲ್ಲ ಎಂದರು.
ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ:
ಇದಕ್ಕೂ ಮೊದಲು ವಿಜಯಪುರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡು ಕೆಲಸವೂ ಆಗುತ್ತಿದೆ. ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.