ಸಮ್ಮಿಶ್ರ ಸರ್ಕಾರದ ವಿರುದ್ಧ ಅಹೋ ರಾತ್ರಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ನಿನ್ನೆ ರಾತ್ರಿ ವಿಧಾನಸೌಧದಲ್ಲೇ ಮಲಗಿದರು.
"ವಿಶ್ವಾಸ ಮತ ಯಾಚನೆ ನಡೆಯದ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯಡಿಯೂರಪ್ಪ, ಈ ಮೈತ್ರಿ ಸರ್ಕಾರವು ಬಹುಮತವನ್ನು ಕಳೆದುಕೊಂಡಿದೆ. ಗುರುವಾರ ವಿಶ್ವಾಸಮತ ಯಾಚನೆ ಮಾಡುವುದಾಗಿ ತಿಳಿಸಿದ್ದ ಮುಖ್ಯಮಂತ್ರಿಗಳು ಇಂದು(ಗುರುವಾರ) ವಿಪ್ ನೆಪ ಒಡ್ಡುತ್ತಿದ್ದಾರೆ. ರಾಜ್ಯಪಾಲರ ಸೂಚನೆಯನ್ನು ಸ್ಪೀಕರ್ ಪಾಲಿಸಲಿಲ್ಲ. ಆದರೆ ವಿಶ್ವಾಸಮತ ಯಾಚನೆ ಆಗುವವರೆಗೂ ನಾವು ಸದನದಲ್ಲೇ ಇರುತ್ತೇವೆ. ವಿಶ್ವಾಸ ಮತಯಾಚನೆಯಾಗುವವರೆಗೂ ತಾವು ಅಹೋರಾತ್ರಿ ಸತ್ಯಾಗ್ರಹ ನಡೆಸುತ್ತೇವೆ" ಎಂದು ಹೇಳಿದರು.
ಗುರುವಾರ ರಾತ್ರಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ತಿಳಿಸಿದ ಬಳಿಕ ವಿಧಾನಸಭೆಯ ಪ್ರತಿಪಕ್ಷದ ಕೋಣೆಯಲ್ಲಿ ಶಾಸಕರ ಜೊತೆ ಚರ್ಚಿಸುತ್ತಿದ್ದ ಬಿ.ಎಸ್. ಯಡಿಯೂರಪ್ಪ ಅವರ ಆರೋಗ್ಯ ತಪಾಸಣೆ ನಡೆಸುತ್ತಿರುವ ವೈದ್ಯರು.
ವಿಧಾನಸೌಧದ ಮೊಗಸಾಲೆಯಲ್ಲಿ ಭೋಜನ ಸೇವಿಸುತ್ತಿರುವ ಬಿಜೆಪಿ ಶಾಸಕರು
ಬಿ.ಎಸ್ ಯಡಿಯೂರಪ್ಪ ಮತ್ತು ಶಾಸಕರು ವಿಧಾನಸೌಧದ ಮೊಗಸಾಲೆಯಲ್ಲಿ ಚರ್ಚಿಸುತ್ತಿರುವ ದೃಶ್ಯ