Vijayapura: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ!

Vijayapura Bike Accident: ಹುಲಗಬಾಳ ಕ್ರಾಸ್ ಹತ್ತಿರ ಅತಿ ವೇಗವಾಗಿ ಬಂದ ಬೈಕ್ ಸವಾರರು ರಸ್ತೆಬದಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದಿದೆ.

Written by - Puttaraj K Alur | Last Updated : Nov 30, 2023, 10:49 AM IST
  • ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವು
  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲಗಬಾಳ ಕ್ರಾಸ್ ಬಳಿ ದುರ್ಘಟನೆ
  • ಸ್ಥಳಕ್ಕೆ ಪೊಲೀಸರ ಭೇಟಿ, ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Vijayapura: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ! title=
ಇಬ್ಬರು ಸ್ಥಳದಲ್ಲೇ ಸಾವು!

ವಿಜಯಪುರ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲಗಬಾಳ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.

ಈ ಭೀಕರ ರಸ್ತೆ ಅಪಘಾತದಲ್ಲಿ ತುಂಬಗಿ ಗ್ರಾಮದ ಮೆಹಬೂಬ್ ನದಾಫ್ (35) ಮತ್ತು ಹುಸೇನ್ ಜಮಾದಾರ್ ​(38) ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ ರೈತರು

ಬುಧವಾರ ರಾತ್ರಿ 8 ಗಂಟೆ ವೇಳೆಗೆ ಮೆಹಬೂಬ್ ಮತ್ತು ಹುಸೇನ್ ಬೈಕ್‍ನಲ್ಲಿ ತಾಳಿಕೋಟೆಯಿಂದ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದರು. ಹುಲಗಬಾಳ ಕ್ರಾಸ್ ಹತ್ತಿರ ಅತಿ ವೇಗವಾಗಿ ಬಂದ ಬೈಕ್ ಸವಾರರು ರಸ್ತೆಬದಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮೆಹಬೂಬ್ ಮತ್ತು ಹುಸೇನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪತ್ರದ ಬಗ್ಗೆ ಸಿಎಂ ತೀರ್ಮಾನ ತಗೋತಾರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News