ನವದೆಹಲಿ: ತೆಲಂಗಾಣದ 119 ಕ್ಷೇತ್ರಗಳಿಗೆ ಗುರುವಾರ ಬೆಳಗ್ಗೆಯಿಂದ ಸಂಜೆ 5ರವರೆಗೆ ಮತದಾನ ನಡೆಯಿತು. ಮತದಾನದ ಮುಕ್ತಾಯದೊಂದಿಗೆ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂನ ಎಕ್ಸಿಟ್ ಪೋಲ್‌ಗಳು ಹೊರಬೀದ್ದಿವೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದರೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿ ಆಡಳಿತ ನಡೆಸುತ್ತಿದ್ದು, ಸಿಎಂ ಕೆ.ಚಂದ್ರಶೇಖರ ರಾವ್ ಅವರು ಸತತ 3ನೇ ಅವಧಿಗೆ ಆಯ್ಕೆಯಾಗಿದ್ದಾರೆ. ಮಿಜೋರಾಂನಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ ರಾಜ್ಯವನ್ನು ಉಳಿಸಿಕೊಳ್ಳಲು ನೋಡುತ್ತಿದ್ದರೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸೆಣಸಾಟ ನಡೆಯುತ್ತಿದೆ.
ಬಿಜೆಪಿಯು ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಮತ್ತು ಮಧ್ಯಪ್ರದೇಶವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷವು ಎಲ್ಲಾ 5 ರಾಜ್ಯಗಳನ್ನು ಗೆದ್ದು ಹೊಸ ಇತಿಹಾಸ ಬರೆಯಲು ನೋಡುತ್ತಿದೆ. ಪಂಚ ರಾಜ್ಯಗಳ ಈ ವಿಧಾನಸಭಾ ಚುನಾವಣಾ ಫಲಿತಾಂಶವನ್ನು 2024ರ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ನೋಡಲಾಗುತ್ತಿದೆ. ಲೋಕಸಭಾ ಚುನಾವಣೆಗೆ ಇನ್ನು ಕೇವಲ 6 ತಿಂಗಳು ಬಾಕಿಯಿದೆ. ಮುಂದಿನ ವರ್ಷ ಪ್ರಧಾನಿ ಮೋದಿಯವರು 3ನೇ ಬಾರಿಗೆ ಅಧಿಕಾರಕ್ಕೆ ಬರಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದು, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಕೇಸರಿ ಪಕ್ಷಕ್ಕೆ ಸೆಡ್ಡು ಹೊಡೆಯುತ್ತಿವೆ.
ಇದನ್ನೂ ಓದಿ: ಮೆಟ್ರೋ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿ ಮೃತಪಟ್ಟ ವ್ಯಕ್ತಿ..! ಅವಸರವೇ ಇದಕ್ಕೆ ಕಾರಣ
ವಿವಿಧ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ:
ತೆಲಂಗಾಣ (Polstrat) – 119 ಸ್ಥಾನಗಳು
BRS – 48-58
ಕಾಂಗ್ರೆಸ್ – 49-59
ಬಿಜೆಪಿ – 05-10
AIMIM – 06-08
ರಾಜಸ್ಥಾನ (Axis My India) - 199 ಸ್ಥಾನಗಳು
ಕಾಂಗ್ರೆಸ್ - 86-106
ಬಿಜೆಪಿ - 80-100
OTH - 05-15
ಛತ್ತೀಸ್‌ಗಢ (Axis My India) 90 ಸ್ಥಾನಗಳು
ಬಿಜೆಪಿ - 36-48
ಕಾಂಗ್ರೆಸ್ - 40-50
OTH - 01-05
Matrize
ಬಿಜೆಪಿ - 36-42
ಕಾಂಗ್ರೆಸ್ - 44-52
OTH - 00-02
Cvoter
ಬಿಜೆಪಿ - 36-48
ಕಾಂಗ್ರೆಸ್ - 41-53
OTH - 04
CNX
ಬಿಜೆಪಿ - 30-40
ಕಾಂಗ್ರೆಸ್ - 46-56
OTH - 03-05
Polstrat
ಬಿಜೆಪಿ - 35-45
ಕಾಂಗ್ರೆಸ್ - 40-50
OTH - 00-03
Poll of Polls
ಬಿಜೆಪಿ - 35-45
ಕಾಂಗ್ರೆಸ್ - 42-52
OTH - 01-04
ಮಿಜೋರಾಂ (CNX) - 40 ಸ್ಥಾನಗಳು
MNF - 14-18
ಬಿಜೆಪಿ - 00-02
ಕಾಂಗ್ರೆಸ್ - 08-10
OTH - 12-16
Polstrat
ಬಿಜೆಪಿ - 100-110
ಕಾಂಗ್ರೆಸ್ - 90-100
OTH - 05-15
ಮಧ್ಯಪ್ರದೇಶ
Polstrat
ಬಿಜೆಪಿ - 106-116
ಕಾಂಗ್ರೆಸ್ - 11-121
OTH - 00-08
Matrize
ಬಿಜೆಪಿ - 118-130
ಕಾಂಗ್ರೆಸ್ - 97-107
OTH - 00-02
ಛತ್ತೀಸ್‌ಗಢ ವಿಧಾನಸಭೆ ಚುನಾವಣೆ 2023: ಛತ್ತೀಸ್‌ಗಢ ವಿಧಾನಸಭಾ ಚುನಾವಣೆ 2023ರ ಮತದಾನವು ನವೆಂಬರ್ 7 ಮತ್ತು 17ರಂದು 2 ಹಂತಗಳಲ್ಲಿ ನಡೆಯಿತು.
ರಾಜಸ್ಥಾನ ವಿಧಾನಸಭೆ ಚುನಾವಣೆ 2018: 2 ದೊಡ್ಡ ಪಕ್ಷಗಳು ರಾಜಸ್ಥಾನದಲ್ಲಿ ಅಧಿಕಾರಕ್ಕಾಗಿ ಹೋರಾಡುತ್ತಿದ್ದು, ಕಾಂಗ್ರೆಸ್ ತನ್ನ ಹಿಡಿತವನ್ನು ಉಳಿಸಿಕೊಳ್ಳಲು ಹವಣಿಸುತ್ತಿದೆ. ಮತ್ತೊಂದೆಡೆ 5 ವರ್ಷಗಳ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ 2018ರ ಚುನಾವಣೆಯಲ್ಲಿ 200ರ ಪೈಕಿ 100 ಸ್ಥಾನಗಳನ್ನು ಗೆದ್ದಿತ್ತು.
ಮಧ್ಯಪ್ರದೇಶ ವಿಧಾನಸಭೆ ಚುನಾವಣೆ 2018: ರಾಜ್ಯದಲ್ಲಿ ಒಟ್ಟು 230 ಸ್ಥಾನಗಳಿಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕಠಿಣ ಪೈಪೋಟಿ ಕಂಡುಬಂದಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 114 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಜೆಪಿ 109 ಸ್ಥಾನ ಪಡೆದುಕೊಂಡಿತ್ತು.
ಇದನ್ನೂ ಓದಿ: “ಏಕೆಂದರೆ ನಾನು…”- 53 ವರ್ಷ ವಯಸ್ಸಾದ್ರೂ ಮದುವೆಯಾಗದಿರಲು ಇದೇ ಕಾರಣ ಎಂದ ರಾಹುಲ್ ಗಾಂಧಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.