ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇದೇ ಸೆಪ್ಟೆಂಬರ್ 28 ರಂದು ನಡೆಯಲಿರುವ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕೇ, ಬೇಡವೇ ಎನ್ನುವ ಬಗ್ಗೆ ಚರ್ಚೆ ನಡೆಸಲು ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಲೋಚನೆ ನಡೆಸಲು ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಬೆಂಗಳೂರು ಮಹಾನಗರ ಪಾಲಿಕೆಯಾ ಜೆಡಿಎಸ್ ಪಕ್ಷದ ಮುಖಂಡರ ಸಭೆಯನ್ನು ಕರೆದಿದ್ದಾರೆ.
ಸಭೆ ಮಧ್ಯಾಹ್ನ ನ 2:30 ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಗೃಹ ಸಚಿವ ಆರ್.ರಾಮಲಿಂಗರೆಡ್ಡಿ ನಿನ್ನೆ ಕಾಂಗ್ರೇಸ್ ಜೊತೆಗಿನ ಮೈತ್ರಿಯ ಬಗ್ಗೆ ಅಸಮಧಾನಗೊಂಡಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಜೊತೆ ಬಿಬಿಎಂಪಿ ಮೈತ್ರಿ ವಿಚಾರದ ಬಗ್ಗೆ ಮಾತುಕತೆ ನಡೆಸಿದ್ದರು. ಈ ನಿಟ್ಟಿನಲ್ಲಿ ದೊಡ್ಡಗೌಡರ ಇಂದಿನ ಸಭೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.