ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯವರು ಮಹದಾಯಿ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಡಿ. 15ರೊಳಗೆ ಮಹದಾಯಿ ವಿಷಯ ಬಗೆಹರಿಸುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾತು ತಪ್ಪಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ.
ಬಿಜೆಪಿ ಪರಿವರ್ತನಾ ಯಾತ್ರೆ ಇಂದಿಗೆ 50 ದಿನ ಪೂರೈಸಿದ್ದು, ಅದರ ಅಂಗವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಇಂದು ಮಹದಾಯಿ ವಿಷಯ ಬಗೆ ಹರಿಸುವ ಕುರಿತು ಘೋಷಣೆ ಹೊರಡಿಸುವುದಾಗಿ ಬಿಎಸ್ವೈ ಬುಧವಾರ ದೆಹಲಿಯಲ್ಲಿ ತಿಳಿಸಿದ್ದಾರೆ.
ಮಹದಾಯಿ ಮಂತ್ರ ಫಲ ಕೊಡಲಿದೆಯೇ? ರಾಜ್ಯದಲ್ಲಿ ಮಹದಾಯಿ ವಿಚಾರವಾಗಿ ಹೋರಾಟ ನಡೆಸುತ್ತಿರುವ ಜನತೆಗೆ ಜಯ ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.