ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಸತತ ಮೂರನೇ ದಿನವೂ ವರುಣನ ಆರ್ಭಟ ಮುಂದುವರೆದಿದ್ದು, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಭಾರೀ ಮಳೆಯಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಈ ಎರಡೂ ಜಿಲ್ಲೆಗಳಿಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ಇಂದು ರೆಡ್ ಅಲರ್ಟ್ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಬಹುದು ಎಂದು ಹೇಳಲಾಗಿದೆ.
ಮಳೆ ಹೆಚ್ಚಾಗುವುದರಿಂದ ಆಯಾ ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.