ಬೆಳಗಾವಿ: ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಲ್ಲಿ ವಿತರಿಸುವ ಪಡಿತರ ಅಕ್ರಮ ತಡೆಗೆ ಸಂಪೂರ್ಣ ಪ್ರಯತ್ನ ಮಾಡಲಾಗುತ್ತಿದೆ ಎಂದು ಆಹಾರ ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಇಂದು ವಿಧಾನ ಪರಿಷತ್ನಲ್ಲಿ ತಿಳಿಸಿದರು.
ಇದನ್ನೂ ಓದಿ: ಬಗೆ ಬಗೆಯ ಕಡಲೆಕಾಯಿ..ಕೆಜಿಗೆ ೮೦ ರೂಪಾಯಿ
ಸದಸ್ಯ ಭಾರತಿ ಶೆಟ್ಟಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಾಣಿಕೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ.
ಇದನ್ನೂ ಓದಿ: ಶಾಸಕರನ್ನ ಖರೀದಿ ವಸ್ತುಗಳನ್ನಾಗಿ ಮಾಡುವ ವಾತಾವರಣ ಸೃಷ್ಟಿ ಮಾಡ್ತಾ ಇದ್ದಾರೆ- ಕಾನೂನು ಸಚಿವ ಎಚ್ಕೆಪಿ
ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರೆಂದು ಕಂಡುಬಂದ -ವ್ಯಕ್ತಿಗಳ ವಿರುದ್ಧ ಹಾಗೂ ಈ ಘಟನೆಗಳಿಗೆ ಕಾರಣಕರ್ತರಾದ ಅಧಿಕಾರಿ/ನೌಕರರ ವಿರುದ್ಧ ಸಂಬಂಧಪಟ್ಟ ಪೋಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಿ ಆಪಾದನೆಗಳ ಬಗ್ಗೆ ದೋಷಾರೋಪಣೆ ಪಟ್ಟಿಯನ್ನು ಸಂಬಂಧಿಸಿದ ನ್ಯಾಯಾಲಯಗಳಲ್ಲಿ ದಾಖಲಿಸಲಾಗುತ್ತಿದ್ದು, ಕಾನೂನು ರೀತ್ಯ ಕ್ರಮ ಜರುಗಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಏಪ್ರಿಲ್-2023 ರಿಂದ ನವೆಂಬರ್-2023 ರ ಅಂತ್ಯದವರೆಗೂ ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪಡಿತರ ಆಹಾರಧಾನ್ಯ ಕಳ್ಳಸಾಗಾಣಿಕೆಯ ಒಟ್ಟು 251 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 232 ಪ್ರಕರಣಗಳಲ್ಲಿ ಎಫ್.ಐ.ಆರ್ ದಾಖಲಿಸಿದ್ದು, ಒಟ್ಟು 31,32,08,215 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, ಈ ಪ್ರಕರಣಗಳಲ್ಲಿ ಒಟ್ಟು 385 ಆರೋಪಿಗಳನ್ನು ಬಂಧಿಸಿ, 167 ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.