ಪ್ರಭಾವಿ ಸಚಿವ ಸೇರಿ 50 ರಿಂದ 60 ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ: ಹೆಚ್ಡಿಕೆ ಹೊಸ ಬಾಂಬ್

HD Kumaraswamy: ಕಾಂಗ್ರೆಸ್‌’ನ ದೊಡ್ಡ ಸಚಿವರು, ಕಾಂಗ್ರೆಸ್‌’ನ ಹಲವು ಶಾಸಕರು ಬಿಜೆಪಿ ಸೇರಬಹುದು. ಬಿಜೆಪಿ ಸೇರಲು ತಯಾರಿ ನಡೆಸುತ್ತಿರುವ ಸಚಿವರು ಕರ್ನಾಟಕ ರಾಜಕೀಯದಲ್ಲಿ ದೊಡ್ಡ ನಾಯಕರಾಗಿರುವ ಕಾರಣ ಕಾಂಗ್ರೆಸ್ ಸರ್ಕಾರಕ್ಕೆ ಮುಂಬರುವ ದಿನಗಳು ಸಂಕಷ್ಟದ ದಿನಗಳು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Written by - Bhavishya Shetty | Last Updated : Dec 11, 2023, 10:48 PM IST
    • ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ
    • ಕುಮಾರಸ್ವಾಮಿ ಹೇಳಿಕೆ ಕರ್ನಾಟಕ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
    • ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಬಹುದು ಎಂದು ಕುಮಾರಸ್ವಾಮಿ
ಪ್ರಭಾವಿ ಸಚಿವ ಸೇರಿ 50 ರಿಂದ 60 ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ: ಹೆಚ್ಡಿಕೆ ಹೊಸ ಬಾಂಬ್ title=
HD Kumaraswamy

HD Kumaraswamy: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಕರ್ನಾಟಕ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಬಹುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾಗೆ ಸಿಕ್ಕೇಬಿಟ್ರು ಜೂ. ಯುವರಾಜ್ ಸಿಂಗ್! ಫ್ಯಾನ್ ಆಗ್ಬಿಟ್ಟೆ ಎಂದ ಗವಾಸ್ಕರ್

ಕಾಂಗ್ರೆಸ್‌’ನ ದೊಡ್ಡ ಸಚಿವರು, ಕಾಂಗ್ರೆಸ್‌’ನ ಹಲವು ಶಾಸಕರು ಬಿಜೆಪಿ ಸೇರಬಹುದು. ಬಿಜೆಪಿ ಸೇರಲು ತಯಾರಿ ನಡೆಸುತ್ತಿರುವ ಸಚಿವರು ಕರ್ನಾಟಕ ರಾಜಕೀಯದಲ್ಲಿ ದೊಡ್ಡ ನಾಯಕರಾಗಿರುವ ಕಾರಣ ಕಾಂಗ್ರೆಸ್ ಸರ್ಕಾರಕ್ಕೆ ಮುಂಬರುವ ದಿನಗಳು ಸಂಕಷ್ಟದ ದಿನಗಳು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್‌’ನ ಪ್ರಭಾವಿ ಸಚಿವರೊಬ್ಬರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳಿಂದ ಪಾರಾಗಲು ಬಯಸಿದ್ದು, ಅದಕ್ಕಾಗಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಖ್ಯಾತ ನಟಿ ಕಂ ಡ್ಯಾನ್ಸರ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅನಿಮಲ್ ಸಿನಿಮಾ ನಟ!

ಆದರೆ ಆ ಸಚಿವರು ಒಬ್ಬರೇ ಅಲ್ಲ, ಅವರ ಜೊತೆಗೆ 50 ರಿಂದ 60 ಶಾಸಕರು ಕೂಡ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ. ಇದಕ್ಕಾಗಿ ಬಿಜೆಪಿ ನಾಯಕರ ಜತೆ ಸಂಪರ್ಕದಲ್ಲಿದ್ದು ಮಾತುಕತೆ ನಡೆಸುತ್ತಿದ್ದಾರೆ. ಕರ್ನಾಟಕ ಯಾವಾಗ ಬೇಕಾದರೂ ಮಹಾರಾಷ್ಟ್ರದಂತೆ ಆಗಬಹುದು ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News