ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಇನ್ನಿಲ್ಲ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕೇಂದ್ರ ಮಾಜಿ ಸಚಿವ ಜೈಪಾಲ್ ರೆಡ್ಡಿ ಭಾನುವಾರ ಮುಂಜಾನೆ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.

Last Updated : Jul 28, 2019, 11:13 AM IST
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಇನ್ನಿಲ್ಲ title=
file photo

ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕೇಂದ್ರ ಮಾಜಿ ಸಚಿವ ಜೈಪಾಲ್ ರೆಡ್ಡಿ ಭಾನುವಾರ ಮುಂಜಾನೆ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.

ಇತ್ತೀಚೆಗೆ ನ್ಯುಮೋನಿಯಾ ರೋಗದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಭಾನುವಾರ ಬೆಳಗ್ಗೆ 1.28 ಕ್ಕೆ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.1984 ರಿಂದ ಸಂಸದರಾಗಿದ್ದ ಜೈಪಾಲ್ ರೆಡ್ಡಿ , ತಮ್ಮ ರಾಜಕೀಯ ಜೀವನದಲ್ಲಿ  ಐದು ಬಾರಿ ಲೋಕಸಭಾ ಸಂಸದರಾಗಿ ಎರಡು ಬಾರಿ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 

ರೆಡ್ಡಿಯವರ ನಿಧನ ತೀವ್ರ ಶೋಕ ವ್ಯಕ್ತಪಡಿಸಿರುವ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಚಿಂತಕರ ರಾಜಕಾರಣಿ ಎಂದು ಸ್ಮರಿಸಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಎಸ್. ಜೈಪಾಲ್ ರೆಡ್ಡಿ  ಅವರು ಚಿಂತನೆಯ ರಾಜಕಾರಣಿ ಮತ್ತು ಅತ್ಯುತ್ತಮ ಸಂಸದರಾಗಿದ್ದರು. ಅವರ ಕುಟುಂಬ ಮತ್ತು ಅನೇಕ ಸಹಚರರಿಗೆ ನನ್ನ ಸಂತಾಪ" ಎಂದು ಅವರು ತಮ್ಮ ಅಧಿಕೃತ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮಾಜಿ ಕೇಂದ್ರ ಸಚಿವರು ಉತ್ತಮ ಭಾಷಣಕಾರ ಮತ್ತು ಪರಿಣಾಮಕಾರಿ ಆಡಳಿತಗಾರ ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ' ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಜೈಪಾಲ್ ರೆಡ್ಡಿಯವರ ಸಾವು ದುಃಖ ತರಿಸಿದೆ. ಅವರೊಬ್ಬ ಮಹಾನ್ ಸಂಸದೀಯ ಪಟು ಹಾಗೂ ತೆಲಂಗಾಣದ ದೊಡ್ಡ ಪುತ್ರ ,ತಮ್ಮ ಇಡೀ ಜೀವಮಾನವನ್ನು ಸಾರ್ವಜನಿಕ ಸೇವೆಗಾಗಿ ಮೀಸಲಿಟ್ಟಿದ್ದರು. ಅವರ ಕುಟುಂಬ ಹಾಗೂ ಅವರ ಬೆಂಬಲಿಗರಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.

ಜೈಪಾಲ್ ರೆಡ್ಡಿ ಐಕೆ ಗುಜ್ರಾಲ್ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದರು. ಯುಪಿಎ -1 ಸರ್ಕಾರದ ಅವಧಿಯಲ್ಲಿ ಅವರು ನಗರ ಅಭಿವೃದ್ಧಿ ಮತ್ತು ಸಂಸ್ಕೃತಿಯಂತಹ ಖಾತೆಗಳನ್ನು ನಿರ್ವಹಿಸಿದ್ದರು.ಯುಪಿಎ -2 ರಲ್ಲಿ ಅವರನ್ನು ಮತ್ತೆ ನಗರಾಭಿವೃದ್ಧಿ ಸಚಿವಾಲಯಕ್ಕೆ ನಿಯೋಜಿಸಲಾಯಿತು. ನಂತರ, ಅವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಸಚಿವರಾದರು ಆದರೆ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವಾಲಯಗಳಿಗೆ ಸ್ಥಳಾಂತರಗೊಂಡರು.

ರೆಡ್ಡಿ ಅವರ ಅಂತ್ಯಕ್ರಿಯೆ ಸೋಮವಾರ ಹೈದರಾಬಾದ್‌ನಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Trending News