/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು: ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತಹದ್ದು.  ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರ ಮಾತ್ರ ಈ ಘಟನೆಯ ಬಗ್ಗೆ ತುಟಿಕ್ ಪಿಟಿಕ್ ಅನ್ನುತ್ತಿಲ್ಲ. ಮಹಿಳಾ ವಿರೋಧಿ ಸಿಎಂ ಸಿದ್ದರಾಮಯ್ಯನವರು, ಬೆಳಗಾವಿಯಲ್ಲೇ ಇದ್ದರೂ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಲಿಲ್ಲ’ವೆಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಎರಡೂ ಕಡೆಯವರ ಗಲಾಟೆ ಗದ್ದಲ ಬೇಸರ ಉಂಟು ಮಾಡಿದೆ

‘ಕಾಂಗ್ರೆಸ್‌ನ ಈ ಕಡು ಮಹಿಳಾ ವಿರೋಧಿ ನೀತಿ ಖಂಡಿಸಿ, ಬಿಜೆಪಿ ಇಂದು(ಡಿ.16) ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ‌. ಇದಲ್ಲದೆ ಕೇಂದ್ರ ಬಿಜೆಪಿ ನಿಯೋಗ ಸಂತ್ರಸ್ತೆ ಬಳಿ ತೆರಳಿ, ಸಾಂತ್ವನ ಹೇಳಿ, ಮಾನಸಿಕ ಧೈರ್ಯ ತುಂಬಲಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಇನ್ನು ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಹಾಗೂ ಭ್ರೂಣ ಹತ್ಯೆ ಪ್ರಕರಣಗಳ್ನು ಖಂಡಿಸಿ ಬಿಜೆಪಿ ಶನಿವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ. ‘ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ! ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಭ್ರೂಣ ಹತ್ಯೆ ತಡೆಗಟ್ಟುವಲ್ಲಿ ವಿಫಲವಾಗಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಇಂದು ಬೆಂಗಳೂರಿನಲ್ಲಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸದನದಲ್ಲಿ ವಿರೋಧ ಪಕ್ಷದ ನಾಯಕನ ಕೊರತೆ ಕಾಣುತ್ತಿತ್ತು : ಸಲೀಂ ಅಹಮದ್

ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Section: 
English Title: 
Karnataka BJP Slams CM Siddaramaiah Over Belagavi Woman Assault Case
News Source: 
Home Title: 

ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!

ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!
Caption: 
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!
Yes
Is Blog?: 
No
Tags: 
Facebook Instant Article: 
Yes
Highlights: 

ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ

ಮಹಿಳಾ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ

Mobile Title: 
ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!
Puttaraj K Alur
Publish Later: 
No
Publish At: 
Saturday, December 16, 2023 - 12:23
Created By: 
Puttaraj K Alur
Updated By: 
Puttaraj K Alur
Published By: 
Puttaraj K Alur
Request Count: 
1
Is Breaking News: 
No
Word Count: 
257