ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ನಿರಂತರವಾಗಿ ಏರಿಕೆಯಾಗುತ್ತಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ದರ ಇಳಿಮುಖವಾಗಿದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಇಂದು ಪರಿಷ್ಕರಿಸಲಾದ ತೈಲ ದರದಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 15 ರಿಂದ 20 ಪೈಸೆ ಕಡಿತ ಕಂಡಿದ್ದು, ಡೀಸೆಲ್ ದರ 09 ಪೈಸೆ ಕಡಿಮೆಯಾಗಿದೆ. ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 72.99ರೂ., ಡೀಸೆಲ್ ಬೆಲೆ 64.07 ರೂ. ಇದೆ.
ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು |
ಪೆಟ್ರೋಲ್ (ರೂ./ಲೀ) |
ಡೀಸೆಲ್ (ರೂ./ಲೀ) |
ದೆಹಲಿ | 72.99 | 66.07 |
ಕೊಲ್ಕತ್ತಾ | 75.63 | 68.22 |
ಮುಂಬೈ | 78.61 | 69.25 |
ಚೆನ್ನೈ | 75.80 | 69.78 |
ಬೆಂಗಳೂರು | 75.41 | 68.25 |
ಹೈದರಾಬಾದ್ | 77.52 | 71.95 |
ತಿರುವನಂತಪುರಂ | 76.26 | 70.99 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: