Health Tips: ಮೊಸರು ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯಕರ ಲಾಭಗಳಿವೆ

Health Benefits Of Curd: ಮೊಸರು ಹೃದಯ ಸಂಬಂಧಿ ಕಾಯಿಲೆ, ರಕ್ತದೊತ್ತಡ, ಮೂತ್ರಪಿಂಡಗಳ ಸಮಸ್ಯೆ ಸೇರಿದಂತೆ ಅನೇಕ ಕಾಯಿಲೆಗಳನ್ನು ಹೋಗಲಾಡಿಸುವ ಗುಣವನ್ನು ಹೊಂದಿದೆ. ಮೊಸರು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಬೆಳೆಯದಂತೆ ತಡೆಯುತ್ತದೆ.

Health Benefits Of Curd: ನಿಯಮಿತವಾಗಿ ಮೊಸರು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಬಹುತೇಕರಿಗೆ ಊಟದ ನಂತರ ಮೊಸರು ಸೇವನೆ ರೂಢಿಯಾಗಿರುತ್ತದೆ. ಮೊಸರು ಸೇವಿಸದಿದ್ದರೆ ಅನೇಕರಿಗೆ ಊಟ ಮಾಡಿದ ಅನುಭವವಾಗುವುದಿಲ್ಲ. ಆರೋಗ್ಯದ ದೃಷ್ಟಿಯಿಂದ ಮೊಸರು ತುಂಬಾ ಪ್ರಯೋಜನಕಾರಿ. ಮನೆಯಲ್ಲೇ ತಯಾರಿಸಿದ ಮೊಸರು ಸೇವಿಸುವುದು ಉತ್ತಮ. ಮೊಸರು ಸೇವನೆಯಿಂದ ಸಿಗುವ ಆರೋಗ್ಯಕರ ಲಾಭಗಳ ಬಗ್ಗೆ ತಿಳಿಯಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮೊಸರು ಕ್ಯಾಲ್ಸಿಯಂ, ವಿಟಮಿನ್ ಡಿ ಮತ್ತು ಪ್ರೋಟಿನ್‍ನಿಂದ ಸಮೃದ್ಧವಾಗಿದೆ.  ಇದಲ್ಲದೆ ದೇಹಕ್ಕೆ ಬೇರೆ ಆಹಾರಗಳಿಂದಲೂ ವಿಟಮಿನ್ಸ್ ಮತ್ತು ಮಿನರಲ್ಸ್ ಹೀರಿಕೊಳ್ಳಲು ಮೊಸರು ಸಹಾಯ ಮಾಡುತ್ತದೆ.

2 /5

ಗಟ್ಟಿ ಮೊಸರು ದೇಹಕ್ಕೆ ಉಷ್ಣವನ್ನು ಹೆಚ್ಚಿಸುತ್ತದೆ. ಹೀಗಾಗಿ ಮೊಸರನ್ನು ಮಜ್ಜಿಗೆ ಮಾಡಿ ಅಥವಾ ಸಕ್ಕರೆ ಬೆರೆಸಿ ಲಸ್ಸಿ ಮಾಡಿ ಕುಡಿದರೆ ದೇಹಕ್ಕೆ ತಂಪು ನೀಡುತ್ತದೆ. ಹೊಟ್ಟೆ ನೋವು, ಮಲ ವಿಸರ್ಜನೆಯಲ್ಲಿ ತೊಂದರೆ ಇದ್ದರೆ ಈ ರೀತಿ ಮೊಸರು ಸೇವಿಸಬಹುದು. ಅಲ್ಸರ್ ನಂತಹ ಸಮಸ್ಯೆಗಳಿಗೂ ಮೊಸರು ತುಂಬಾ ಉಪಯೋಗಕಾರಿ.

3 /5

ಮೊಸರು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಲವು ಇನ್ಫೆಕ್ಷನ್‍ಗಳಿಂದ ಬಳಲುತ್ತಿರುವವರು ತಮ್ಮ ಆಹಾರದಲ್ಲಿ ಮೊಸರನ್ನು ಹೆಚ್ಚಾಗಿ ಬಳಸಬಹುದು.

4 /5

ಮೊಸರು ಸೇವನೆ ದೇಹದ ಮೂಳೆಯನ್ನು ಗಟ್ಟಿ ಮಾಡುತ್ತದೆ. ಇದರಲ್ಲಿ ಕ್ಯಾಲ್ಸಿಯಂ ಅಂಶ ಹೇರಳವಾಗಿರುತ್ತದೆ. ಇದರಿಂದ ದೇಹದ ಮೂಳೆಗಳು ಅಷ್ಟೇ ಅಲ್ಲದೆ ಹಲ್ಲುಗಳು ಗಟ್ಟಿಯಾಗುತ್ತದೆ. ಹೃದಯ ಸಂಬಂಧಿ ಕಾಯಿಲೆ, ರಕ್ತದೊತ್ತಡ, ಮೂತ್ರಪಿಂಡಗಳ ಸಮಸ್ಯೆ ಸೇರಿದಂತೆ ಅನೇಕ ಕಾಯಿಲೆಗಳನ್ನು ಹೋಗಲಾಡಿಸುವ ಗುಣವನ್ನು ಹೊಂದಿದೆ.

5 /5

ಮೊಸರು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಬೆಳೆಯದಂತೆ ತಡೆಯುತ್ತದೆ. ದೇಹದ ತೂಕ ಹೆಚ್ಚಿಸಲು ಇಷ್ಟಪಡುವವರು ದೈನಂದಿನ ಆಹಾರದಲ್ಲಿ ಮೊಸರನ್ನು ಸೇವಿಸಬಹುದು. ಮೊಸರು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಲಾಭಗಳನ್ನು ಪಡೆಯಬಹುದು. ಅನೇಕ ಕಾಯಿಲೆಗಳಿಂದ ಮುಕ್ತಿ ಸಹ ಪಡೆಯಬಹುದು.