ಕಾಂತಾರ ಮೂಲಕ ದೇಶದ ಟಾಪ್ ನಟ ನಿರ್ದೇಶಕರಾಗಿ ಗುರುತಿಸಿಕೊಂಡಿರುವ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬೇರೆಯವರಿಗೆ ಸ್ಪೂರ್ತಿದಾಯಕವಾದ ಕೆಲಸವೊಂದನ್ನು ಮಾಡಿದ್ದಾರೆ. ರಿಷಬ್ ಶೆಟ್ಟಿ ತಮ್ಮ ಹುಟ್ಟುರಾದ ಕೆರಾಡಿಯಲ್ಲಿ ಮಾಡಿರುವ ಈ ಕೆಲಸಕ್ಕೆ ದೇವರುಗಳೆ ಸಂತಸ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ಏನಿದು ಸ್ಟೋರಿ ಯಾವ ದೇವ್ರು ಏನ್ ಕಥೆ ಅಂತೀರಾ... ಈ ಸುದ್ದಿ ಓದಿ...
ಹೌದು, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ. ಕನ್ನಡ ಶಾಲೆಗಳ ಸದ್ಯದ ಪರಿಸ್ಥಿತಿ ಕುರಿತು ಮನಮುಟ್ಟುವ ಚಿತ್ರಣವನ್ನು ಕಟ್ಟಿಕೊಟ್ಟಂತ ನಟ ನಿರ್ದೇಶಕ ಸದ್ಯ ಕಾಂತಾರ ಪ್ರಿಕ್ವೇಲ್ ನಿರ್ಮಾಣದ ಗಡಿಬಿಡಿಯಲ್ಲಿದ್ದಾರೆ. ಇಂತಹ ಬ್ಯುಸಿ ಶೆಡ್ಯೂಲ್ ನಲ್ಲೂ ಕೂಡ ರಿಷಬ್ ಶೆಟ್ಟಿ ತಮ್ಮ ಹುಟ್ಟೂರಿನ ಸಮಸ್ಯೆಗೆ ಸ್ಪಂದಿಸುವ ಮೂಲಕ ಹುಟ್ಟೂರಿನಲ್ಲೂ ಸಹಾಯ ಹಸ್ತ ಚಾಚಿದ್ದಾರೆ. ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜ ಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ತಾವು ಓದಿದ್ದ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ- ರಿಲೀಸ್ಗೂ ಮುನ್ನ DBoss ʼಕಾಟೇರʼ ಸಿನಿಮಾಗೆ ವಿಘ್ನ : ವಿವಾದ ಸೃಷ್ಟಿಸಿತು "ಆ" ಒಂದು ಡೈಲಾಗ್
ಕೆರಾಡಿಗೆ ಭೇಟಿ ನೀಡಿದ್ದ ಅವರು, ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ಬಗ್ಗೆ ಮಾತನಾಡಿದ್ದರು. ಈ ವೇಳೆ ಗ್ರಾಮದ ಪ್ರಮುಖರು ರಿಷಭ್ ಶೆಟ್ಟಿ ಅವರನ್ನು ಅಭಿನಂದಿಸಿ ಶುಭಹಾರೈಸಿದ್ದರು. ಭಾನುವಾರ ನಡೆದ ಎಸ್ಡಿಎಂಸಿ ಸಭೆಯಲ್ಲಿ ರಿಷಬ್ ಶೆಟ್ಟಿ ಅವರು, ಶಾಲೆಯನ್ನು ದತ್ತು ತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಮೂರು ದಶಕಗಳ ಹಿಂದೆ ಶಾಲೆಯಲ್ಲಿ 400 ಮಂದಿ ಮಕ್ಕಳಿದ್ದ ಕೆರಾಡಿ ಶಾಲೆಯಲ್ಲಿ ಪ್ರಸ್ತುತ 71 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಬ್ಬರು ಖಾಯಂ ಶಿಕ್ಷಕರಿದ್ದಾರೆ, ಉಳಿದವರು ಗೌರವ ಶಿಕ್ಷಕರಾಗಿದ್ದಾರೆ. ನಾನು ಸ್ವತಃ ಈ ಶಾಲೆಯ ಸ್ಥಿತಿಗತಿಯನ್ನು ತಿಳಿದುಕೊಂಡಿದ್ದು, ರಿಷಬ್ ಫೌಂಡೇಶನ್ ಮುಂದಿನ ಶೈಕ್ಷಣಿಕ ವರ್ಷದಿಂದ 5 ವರ್ಷಗಳ ಅವಧಿಗೆ ಈ ಶಾಲೆಯನ್ನು ದತ್ತು ಪಡೆಯುತ್ತೇನೆ. ಮೂಲಭೂತ ಸೌಕರ್ಯ ಸಹಿತ ಕೊಠಡಿ, ಪ್ರತೀ ತರಗತಿಗೆ ಶಿಕ್ಷಕರು, ಆವರಣ ಗೋಡೆ, ಅಗತ್ಯವಿದ್ದರೆ ವಾಹನದ ವ್ಯವಸ್ಥೆ ಕಲ್ಪಿಸಲಿದೆ. ಇದಲ್ಲದೆ ಎಲ್ಕೆಜಿ – ಯುಕೆಜಿ, ಸ್ಪೋಕನ್ ಇಂಗ್ಲಿಷ್ ಕಲಿಕೆ ಆರಂಭಿಸುವ ಯೋಜನೆಯಿದೆ ಎಂದು ಹೇಳಿರುವುದು ಪುಟಾಣಿ ದೇವರುಗಳ ಸಂತಸಕ್ಕೆ ಕಾರಣವಾಗಿದೆ.
ಇದನ್ನೂ ಓದಿ- ಶಾರುಖ್ ಖಾನ್ ಪುತ್ರ ಅಬ್ರಾಮ್ ಓದುವ ಸ್ಕೂಲ್ ಫೀಸ್ ಎಷ್ಟಿದೆ ಗೊತ್ತಾ?
ಒಟ್ಟಾರೆಯಾಗಿ ಗ್ರಾಮೀಣ ಭಾಗದ ಶಾಲೆಯಲ್ಲೂ ರಿಷಬ್ ಶೆಟ್ಟಿಯವರು ಹೆಚ್ಚುವರಿ ಶಿಕ್ಷಕರ ನೇಮಕ ಹಾಗೂ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪರಿಚಯಿಸುವ ಮೂಲಕ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಬದಲಾಯಿಸಲು ಬಯಸುತ್ತಿದ್ದಾರೆ. ಶೀಘ್ರದಲ್ಲೇ ಇಲಾಖೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆಂದು ಉಡುಪಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.