ಬೆಂಗಳೂರು: ಭಾರತೀಯ ಜನತಾ ಪಕ್ಷದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕರ್ನಾಟಕ ವಿಧಾನಸಭಾ ಸ್ಪೀಕರ್ ಹುದ್ದೆಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಮತ್ತು ಪಕ್ಷದ ಇತರ ಹಿರಿಯ ಮುಖಂಡರು ಉಪಸ್ಥಿತರಿದ್ದರು.
Bengaluru: BJP MLA Vishweshwar Hegde Kageri files nomination for election to the post of Karnataka Assembly Speaker, Chief Minister BS Yediyurappa accompanied him. pic.twitter.com/jXP9DHx66z
— ANI (@ANI) July 30, 2019
ಕರ್ನಾಟಕ ವಿಧಾನಸಭೆಯಲ್ಲಿ ಯಡಿಯೂರಪ್ಪ ವಿಶ್ವಾಸ ಮತ ಗೆದ್ದ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಾಂಗ್ರೆಸ್-ಜೆಡಿಎಸ್ ಸರ್ಕಾರ ತನ್ನ ಬಹುಮತವನ್ನು ಸಾಬೀತುಪಡಿಸುವಲ್ಲಿ ವಿಫಲವಾದ ನಂತರ ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಯಡಿಯುರಪ್ಪ ಅವರು ಧ್ವನಿ ಮತದಿಂದ ವಿಶ್ವಾಸಮತಯಾಚನೆಯಲ್ಲಿ ಗೆಲುವು ಸಾಧಿಸಿದ್ದರು. ಸ್ಪೀಕರ್ ಅವರು 17 ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ ನಂತರ ವಿಧಾನಸಭೆಯ ಬಲವನ್ನು ತಗ್ಗಿಸಲಾಯಿತು.ಇದರಿಂದಾಗಿ ಬಿಜೆಪಿಗೆ ಬಹುಮತ ಸಾಬೀತುಪಡಿಸುವುದು ಸುಲಭವಾಯಿತು.