Benefits Of Drinking Tulsi Water: ತುಳಸಿ ಎಲೆಗಳಲ್ಲಿರುವ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿಬಯೋಟಿಕ್ ಗುಣಗಳು ದೇಹದ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗಾಗಿ ಪ್ರತಿದಿನ ಇದನ್ನು ಸೇವಿಸಿದ್ರೆ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.
ನವದೆಹಲಿ: ಹಿಂದೂ ಧರ್ಮದಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ತುಳಸಿಯಲ್ಲಿ ಹಲವಾರು ಔಷಧೀಯ ಗುಣಗಳಿವೆ. ತುಳಸಿ ರೋಗನಿರೋಧಕ ಶಕ್ತಿ ಬಲಪಡಿಸಲು ಸಹಕಾರಿಯಾಗಿದ್ದು, ವಿವಿಧ ರೋಗಗಳಿಗೆ ಪ್ರಯೋಜನಕಾರಿಯಾಗಿದೆ. ಆಯುರ್ವೇದ ಮತ್ತು ಮನೆಮದ್ದುಗಳಲ್ಲಿ ತುಳಸಿಯನ್ನು ಬಳಸಲಾಗುತ್ತದೆ. ತುಳಸಿ ನೀರು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪ್ರತಿದಿನ ಬೆಳಗ್ಗೆ ತುಳಸಿ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬೆಳಗ್ಗೆ 1 ಲೋಟ ತುಳಸಿ ನೀರನ್ನು ಕುಡಿಯುವುದು ನೈಸರ್ಗಿಕವಾಗಿ ದೇಹದಲ್ಲಿ ಸಂಗ್ರಹವಾದ ಕಲ್ಮಶ ಮತ್ತು ವಿಷಗಳನ್ನು ಹೊರಹಾಕುತ್ತದೆ. ಇದು ನಮಗೆ ದೈನಂದಿನ ಡಿಟಾಕ್ಸ್ ಪಾನೀಯವಾಗಿ ಕಾರ್ಯನಿರ್ವಹಿಸುತ್ತದೆ.
ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ತುಳಸಿ ನೀರು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಕೊಬ್ಬು ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಕರಗಿಸಲು ಸಹಕಾರಿಯಾಗಿದೆ.
ತುಳಸಿ ಎಲೆಯು ಚಯಾಪಚಯ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ತೂಕ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ನಿಮಗೆ ಅಜೀರ್ಣ ಮತ್ತು ಆಮ್ಲೀಯತೆಯ ಸಮಸ್ಯೆಗಳಿದ್ದರೆ ಪ್ರತಿದಿನ 2 ರಿಂದ 3 ತುಳಸಿ ಎಲೆಗಳನ್ನು ಅಗಿದು ಸೇವಿಸಿರಿ.
ತುಳಸಿ ಎಲೆಗಳಲ್ಲಿರುವ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿಬಯೋಟಿಕ್ ಗುಣಗಳು ದೇಹದ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗಾಗಿ ಪ್ರತಿದಿನ ಇದನ್ನು ಸೇವಿಸಿದ್ರೆ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.
ತುಳಸಿ ಎಲೆಗಳ ನೀರನ್ನು ತಯಾರಿಸಲು ಪಾತ್ರೆಯಲ್ಲಿ ಒಂದು ಲೋಟ ನೀರು ಸೇರಿಸಿ ಚೆನ್ನಾಗಿ ಕುದಿಸಬೇಕು. ನೀರು ಕುದಿಯುವಾಗ ತುಳಸಿ ಎಲೆಗಳನ್ನು ಸೇರಿಸಬೇಕು. ಸ್ವಲ್ಪ ಹೊತ್ತು ಬಿಟ್ಟು ಅದನ್ನು ಒಂದೊಂದೇ ಗುಟುಕಿನಂತೆ ಸೇವಿಸಬೇಕು.