Coronavirus JN.1 Latest Update: ದೇಶದಲ್ಲಿ ಕೊರೋನಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕೋವಿಡ್ -19ರ ಹೊಸ ರೂಪಾಂತರ JN.1 ವೇಗವಾಗಿ ಹರಡುತ್ತಿದ್ದು ಸಮಸ್ಯೆಯನ್ನು ಹೆಚ್ಚಿಸುತ್ತಿದೆ ಇಲ್ಲಿಯವರೆಗೆ ಅದರ ಪ್ರಕರಣಗಳು ದೇಶಾದ್ಯಂತ 69ಕ್ಕೆ ಏರಿದೆ. ಹೊಸ ವರ್ಷಾಚರಣೆಗೂ ಮುನ್ನ ಕೊರೋನಾ ಸೋಂಕು ವೇಗವಾಗಿ ಹರಡುತ್ತಿದ್ದು, ದೇಶಾದ್ಯಂತ ಸಕ್ರಿಯವಾಗಿರುವ ಕೋವಿಡ್-19 ರೋಗಿಗಳ ಸಂಖ್ಯೆ 4,170ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ, ಜನರು ಮಾಸ್ಕ್ ಧರಿಸಲು ಮತ್ತು ಕೋವಿಡ್ -19 ಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಅನುಸರಿಸಲು ಸರ್ಕಾರ ಸೂಚನೆ ನೀಡಿದೆ.
ನಿನ್ನೇ ಒಂದೇ ದಿನ 412 ಕೇಸ್:
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, 24 ಗಂಟೆಗಳಲ್ಲಿ ದೇಶಾದ್ಯಂತ 412 ಹೊಸ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 24 ಗಂಟೆಗಳಲ್ಲಿ 3 ರೋಗಿಗಳು ಕೊರೋನಾ ಸೋಂಕಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಸೋಮವಾರ ಒಂದೇ ದಿನ 628 ಹೊಸ ಪ್ರಕರಣಗಳು ವರದಿಯಾಗಿದ್ದವು. ಭಾನುವಾರ 24 ಗಂಟೆಗಳಲ್ಲಿ 656 ಹೊಸ ಪ್ರಕರಣಗಳು ವರದಿಯಾಗಿದ್ದವು. ಸಾಂಕ್ರಾಮಿಕ ರೋಗ ಹರಡಿದ ನಂತರ ಒಟ್ಟು ಸೋಂಕಿತರ ಸಂಖ್ಯೆ 4.5 ಕೋಟಿ ತಲುಪಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಇದುವರೆಗೆ 4.44 ಕೋಟಿ ರೋಗಿಗಳು ಕೊರೋನಾ ವೈರಸ್‌ನಿಂದ ಚೇತರಿಸಿಕೊಂಡಿದ್ದರೆ, 5.33 ಲಕ್ಷ ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕೇರಳದಿಂದ ಗುಡ್ ನ್ಯೂಸ್
ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಯಾವುದೇ ಹೊಸ ಕೊರೋನಾ ಸೋಂಕು ಪ್ರಕರಣ ಕಂಡುಬಂದಿಲ್ಲ. ಕೇರಳದಿಂದ ಒಂದೇ ಒಂದು ಕೋವಿಡ್ -19 ಪ್ರಕರಣ ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಆರೋಗ್ಯ ಸಚಿವಾಲಯದ ಪ್ರಕಾರ ಕೇರಳದಲ್ಲಿ ಸಕ್ರಿಯ ರೋಗಿಗಳ ಸಂಖ್ಯೆ 3,128 ರಿಂದ 3,096ಕ್ಕೆ ಇಳಿದಿದೆ. ಇದರೊಂದಿಗೆ, ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಕೋವಿಡ್ -19 ನಿಂದ ಒಬ್ಬ ರೋಗಿಯೂ ಸಾವನ್ನಪ್ಪಿಲ್ಲ.
ಇದನ್ನೂ ಓದಿ- ಕೋವಿಡ್ ಪಾಸಿಟಿವ್ ಬಂದವರಿಗೆ 7 ದಿನ ಹೋಮ್ ಐಸೊಲೇಷನ್ ಕಡ್ಡಾಯ
ಕರ್ನಾಟಕದಲ್ಲಿ ಕೊರೋನಾ ಅಲರ್ಟ್:
ಕರ್ನಾಟಕದಲ್ಲಿ JN1 ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಕೊಡಿಸಲು ಮುಂದಾಗಿದೆ. ಮೂರನೇ ಕೊರೋನಾ ಲಸಿಕೆ ಹಾಕಿಸಿಕೊಳ್ಳದೇ ಇರುವ ವೃದ್ಧರು ಕೂಡಲೆ ಲಸಿಕೆ ಹಾಕಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಕೊಡಿಸಲು ಮತ್ತು ಮೂರನೇ ಕೊರೋನಾ ಲಸಿಕೆ ಹಾಕಿಸಿಕೊಳ್ಳದೇ ಇರುವ ವೃದ್ಧರು ಕೂಡಲೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಕೊಡಿಸುವ ಸಂಬಂಧ ಇನ್ನೆರಡು ದಿನದಲ್ಲಿ ಅಭಿಯಾನ ಶುರು ಆಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬೂಸ್ಟರ್ ಡೋಸ್ ಸಂಬಂಧ ಆರೋಗ್ಯ ಇಲಾಖೆ ಸಿಬ್ಬಂದಿಗಳಿಂದ ಜಿಲ್ಲಾ ಕೇಂದ್ರಗಳಲ್ಲಿ ಅಭಿಯಾನ ನಡೆಯಲಿದೆ.
ಇದನ್ನೂ ಓದಿ- ಹೊಸ ವರ್ಷದ ಹೊಸ್ತಿಲಲ್ಲಿ ಕೊರೊನಾ ಕಾಟ: ಕರುನಾಡಿಗೂ ಕಾಲಿಟ್ಟ JN-1 ಪ್ರಕರಣ
ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 232 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ ಅಥವಾ ರಾಜ್ಯದಿಂದ ಹೊರಗೆ ತೆರಳಿದ್ದಾರೆ. ಇಲ್ಲಿಯವರೆಗೆ ಒಟ್ಟು 68,38,761 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ. ಕೇರಳದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗಿದ್ದರೂ ಸೋಂಕಿನ ಪ್ರಕರಣಗಳನ್ನು ಎದುರಿಸಲು ರಾಜ್ಯವು ಉತ್ತಮವಾಗಿ ಸಿದ್ಧವಾಗಿರುವುದರಿಂದ ಆತಂಕಕ್ಕೆ ಕಾರಣವಿಲ್ಲ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಂಗಳವಾರ ಹೇಳಿದ್ದಾರೆ.
ಕೊರೋನಾ ವೈರಸ್‌ನ ಉಪ-ವೇರಿಯಂಟ್ JN.1ನ ಆರು ಪ್ರಕರಣಗಳು ಮಂಗಳವಾರ ಭಾರತದಲ್ಲಿ ವರದಿಯಾಗಿವೆ. ಇದರ ನಂತರ ಈ ರೂಪಾಂತರದಿಂದ ಸೋಂಕಿತ ರೋಗಿಗಳ ಸಂಖ್ಯೆ 69ಕ್ಕೆ ಏರಿದೆ. ಈ ರೋಗಿಗಳಲ್ಲಿ ಹೆಚ್ಚಿನವರು ಪ್ರಸ್ತುತ ಹೋಮ್ ಐಸೋಲೇಶನ್‌ನಲ್ಲಿದ್ದಾರೆ ಮತ್ತು ಆಸ್ಪತ್ರೆಗೆ ದಾಖಲಾಗುವ ದರದಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.
NITI ಆಯೋಗ್ ಸದಸ್ಯ (ಆರೋಗ್ಯ) ಡಾ. ವಿಕೆ ಪಾಲ್ ಕಳೆದ ವಾರ ಭಾರತದಲ್ಲಿ ವೈಜ್ಞಾನಿಕ ಸಮುದಾಯವು ಕೊರೋನಾ ವೈರಸ್ ಹೊಸ ಉಪ-ರೂಪವನ್ನು ನಿಕಟವಾಗಿ ತನಿಖೆ ಮಾಡುತ್ತಿದೆ ಮತ್ತು ರಾಜ್ಯಗಳು ಪರೀಕ್ಷೆಯನ್ನು ಹೆಚ್ಚಿಸುವ ಮತ್ತು ತಮ್ಮ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಮತ್ತು JN.1 ಉಪ-ವ್ಯತ್ಯಯ ಪತ್ತೆಯಾಗಿದ್ದರೂ, ಸೋಂಕಿತರಲ್ಲಿ ಶೇಕಡಾ 92 ರಷ್ಟು ಜನರು ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯುತ್ತಿರುವುದರಿಂದ ತಕ್ಷಣದ ಆತಂಕಕ್ಕೆ ಯಾವುದೇ ಕಾರಣವಿಲ್ಲ. ಇದು ಹೊಸ ಉಪ-ರೂಪದ ಲಕ್ಷಣಗಳು ಸೌಮ್ಯವಾಗಿರುತ್ತವೆ ಎಂದು ತೋರಿಸುತ್ತದೆ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.