ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 7ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೆರೆ, ನದಿ ಮತ್ತು ತಗ್ಗು ಪ್ರದೇಶಗಳಿಗೆ ಹೋಗದಂತೆ ಜನರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಮುಂದಿನ ಮೂರು ದಿನಗಳು ಮೀನುಗಾರರಿಗೂ ಕಡಲಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಳೆ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ಅಧಿಕಾರಿಗಳೂ ಹಾಗೂ ಸಿಬ್ಬಂದಿಗಳು ರಜೆ ತಗೆದುಕೊಳ್ಳದೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನಿದಲಾಗಿದ್ದು, ಜನರ ಸಮಸ್ಯೆಗಳಿಗೆ ತುರ್ತು ಸ್ಪಂದಿಸುವಂತೆ ನೋಡೆಲ್ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.