ಹೊಸ ವರ್ಷಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹೊಸಚಿತ್ರ ಅನೌನ್ಸ್‌

Shivrajkumar New Movie: ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ.

Written by - Chetana Devarmani | Last Updated : Dec 31, 2023, 12:31 PM IST
  • ಶಿವರಾಜಕುಮಾರ್ ಹೊಸಚಿತ್ರ ಅನೌನ್ಸ್‌
  • ನಿರ್ದೇಶಕ ದಿನಕರ್ ತೂಗುದೀಪ ಆಕ್ಷನ್‌ ಕಟ್‌
  • ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆ
ಹೊಸ ವರ್ಷಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹೊಸಚಿತ್ರ ಅನೌನ್ಸ್‌   title=

Shivrajkumar New Movie: ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 

ಇದನ್ನೂ ಓದಿ :  14 ವರ್ಷದ ದಾಂಪತ್ಯಕ್ಕೆ ಫುಲ್‌ ಸ್ಟಾಪ್‌.. ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ಸೂರ್ಯವಂಶ ನಟಿ.! 

ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಪ್ರೀ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗುತ್ತಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಆಯ್ಕೆ ನಡೆಯುತ್ತಿದೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ.

ಇದನ್ನೂ ಓದಿ :  ಪ್ರಭಾಸ್ 1 ದಿನದ ಊಟಕ್ಕೆ ಎಷ್ಟು ಲಕ್ಷ ಖರ್ಚು ಮಾಡ್ತಾರೆ ಗೊತ್ತಾ..! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News