ನ್ಯೂ ಇಯರ್‌ಗೆ "ಕೃಷ್ಣಂ ಪ್ರಣಯ ಸಖಿ" ನ್ಯೂ ಪೋಸ್ಟ್‌ರ್‌ ರಿಲೀಸ್‌!

Krishnam Pranaya Sakhi: ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಇಟಲಿ ಮತ್ತು ಮಾಲ್ಟಾದಲ್ಲಿ ನಡೆಯಲಿದೆ. 

Written by - YASHODHA POOJARI | Edited by - Savita M B | Last Updated : Jan 1, 2024, 05:31 PM IST
  • ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕ ನಾಯರ್ ಹಾಗೂ ಶರಣ್ಯ ಶೆಟ್ಟಿ ಹಾಡುಗಳ ಚಿತ್ರೀಕರಣದಲ್ಲಿ ಪಾಲ್ಗೊಳಲಿದ್ದಾರೆ.
  • ಹಾಡುಗಳ ಚಿತ್ರೀಕರಣಕ್ಕಾಗಿ ಮೂವತ್ತು ಜನರ ತಂಡ ಇಟಲಿಗೆ ಪ್ರಯಾಣ ಬೆಳಸಲಿದೆ.
  • ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಎಲ್ಲರಿಗೂ ಚಿತ್ರತಂಡ ಹೊಸವರ್ಷದ ಶುಭಾಶಯ ತಿಳಿಸಿದೆ.
ನ್ಯೂ ಇಯರ್‌ಗೆ "ಕೃಷ್ಣಂ ಪ್ರಣಯ ಸಖಿ" ನ್ಯೂ ಪೋಸ್ಟ್‌ರ್‌ ರಿಲೀಸ್‌!  title=

Golden Star Ganesh: ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕ ನಾಯರ್ ಹಾಗೂ ಶರಣ್ಯ ಶೆಟ್ಟಿ ಹಾಡುಗಳ ಚಿತ್ರೀಕರಣದಲ್ಲಿ ಪಾಲ್ಗೊಳಲಿದ್ದಾರೆ. ಹಾಡುಗಳ ಚಿತ್ರೀಕರಣಕ್ಕಾಗಿ ಮೂವತ್ತು ಜನರ ತಂಡ ಇಟಲಿಗೆ ಪ್ರಯಾಣ ಬೆಳಸಲಿದೆ. ಹೊಸವರ್ಷ ಆರಂಭದ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಎಲ್ಲರಿಗೂ ಚಿತ್ರತಂಡ ಹೊಸವರ್ಷದ ಶುಭಾಶಯ ತಿಳಿಸಿದೆ. 

ಇದನ್ನೂ ಓದಿ-ಹೌದು ನಾವು ಒಂದೇ ಮನೆಯಲ್ಲಿಲ್ಲ : ಎದುರಾದ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸಿದ ಅಭಿಷೇಕ್ ಬಚ್ಚನ್

ಯಶಸ್ವಿ ಚಿತ್ರಗಳ ನಿರ್ದೇಶಕ  ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ  ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ "ಕೃಷ್ಣಂ ಪ್ರಣಯ ಸಖಿ" ಚಿತ್ರಕ್ಕಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಾಣ ಮಾಡುತ್ತಿದ್ದಾರೆ. 

ಇದನ್ನೂ ಓದಿ-Aditi Prabhudeva: 2024 ಕ್ಕೆ ನಾನು "ಅಮ್ಮ".. ಹೊಸವರ್ಷಕ್ಕೆ ಸಿಹಿಸುದ್ದಿ ಕೊಟ್ಟ ರಂಗನಾಯಕಿ!

"ಕೃಷ್ಣಂ ಪ್ರಣಯ ಸಖಿ" ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ,  ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News