Best oil for weight lose : ಅಸಮತೋಲಿತ ಆಹಾರ ಮತ್ತು ನಿಷ್ಕ್ರಿಯ ಜೀವನಶೈಲಿಯಿಂದಾಗಿ, ತೂಕ ಹೆಚ್ಚಳದ ಅಪಾಯ ಕೂಡಾ ಹೆಚ್ಚಾಗುತ್ತದೆ. ತೂಕ ಹೆಚ್ಚಾಗುವುದರಿಂದ, ದೇಹದಲ್ಲಿ ಅನೇಕ ಗಂಭೀರ ಕಾಯಿಲೆಗಳ ಸಮಸ್ಯೆ ಎದುರಾಗುತ್ತದೆ. ಇದರಿಂದ ಅಧಿಕ ರಕ್ತದೊತ್ತಡ, ಮಧುಮೇಹ, ಕೊಲೆಸ್ಟ್ರಾಲ್ನಂತಹ ಸಮಸ್ಯೆಗಳ ಅಪಾಯ ಕಾಡುತ್ತದೆ. ತೂಕವನ್ನು ನಿಯಂತ್ರಿಸಲು, ಜನರು ವಿವಿಧ ರೀತಿಯ ಆಹಾರ ಮತ್ತು ಸಪ್ಲಿಮೆಂಟರಿ ಗಳನ್ನೂ ಸೇವಿಸುತ್ತಾರೆ. ತೂಕ ಇಳಿಸಲು ಮಾರುಕಟ್ಟೆಯಲ್ಲಿ ಸಿಗುವ ಬಹುತೇಕ ಸಪ್ಲಿಮೆಂಟ್ ಗಳಲ್ಲಿ ರಾಸಾಯನಿಕಗಳಿರುತ್ತವೆ. ಅವುಗಳನ್ನು ಸೇವಿಸುವುದರಿಂದ ಅನೇಕ ಗಂಭೀರ ಸಮಸ್ಯೆಗಳು ಮತ್ತು ಅಪಾಯಗಳು ಎದುರಾಗುತ್ತವೆ. ಹೀಗಿರುವಾಗ ತೂಕವನ್ನು ಕಳೆದುಕೊಳ್ಳಲು ನೈಸರ್ಗಿಕ ಉತ್ಪನ್ನಗಳನ್ನು ಸೇವಿಸಬಹುದು.
ತೂಕ ನಷ್ಟಕ್ಕೆ ಸೂರ್ಯಕಾಂತಿ ಎಣ್ಣೆ :
ಸೂರ್ಯಕಾಂತಿ ಬೀಜಗಳು ಮತ್ತು ಸೂರ್ಯಕಾಂತಿ ಎಣ್ಣೆಯ ಸೇವನೆ ದೇಹದ ತೂಕವನ್ನು ನಿಯಂತ್ರಿಸಲು, ದೇಹದ ಕೊಬ್ಬನ್ನು ಕಡಿಮೆ ಮಾಡಲು ಮತ್ತು ಹೊಟ್ಟೆಯ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಸೂರ್ಯಕಾಂತಿ ಬೀಜಗಳು ಮತ್ತು ಅವುಗಳ ಎಣ್ಣೆಯು ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಅಗತ್ಯವಾದ ಖನಿಜಗಳಿಂದ ಸಮೃದ್ಧವಾಗಿದೆ.ಇದನ್ನು ನಿಯಮಿತವಾಗಿ ಸೇವಿಸುವುದರಿಂದ ತೂಕ ಇಳಿಸಲು ಸಹಾಯ ಮಾಡುತ್ತದೆ. ಸೂರ್ಯಕಾಂತಿ ಎಣ್ಣೆಯು ಒಲೀಕ್ ಆಮ್ಲ, ಲಿನೋಲಿಕ್ ಆಮ್ಲ ಮತ್ತು ವಿಟಮಿನ್ ಇ ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ.ಇದರಲ್ಲಿರುವ ಫೈಬರ್ ಮತ್ತು ಆ್ಯಂಟಿ ಆಕ್ಸಿಡೆಂಟ್ಗಳು ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಇದು ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದನ್ನು ನಿಯಮಿತ ಪ್ರಮಾಣದಲ್ಲಿ ಸೇವಿಸುವುದು ತೂಕ ನಷ್ಟಕ್ಕೆ ತುಂಬಾ ಪರಿಣಾಮಕಾರಿಯಾಗಿದೆ .
ಇದನ್ನೂ ಓದಿ : ನಿಂಬೆ ಹಣ್ಣು ಕುದಿಸಿ ಆ ನೀರು ಕುಡಿಯುವುದರಿಂದ ಆಗುವ ಲಾಭಗಳಿವು..!
ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ಸೂರ್ಯಕಾಂತಿ ಎಣ್ಣೆ :
ಸೂರ್ಯಕಾಂತಿ ಬೀಜಗಳು ಮತ್ತು ಅವುಗಳ ಎಣ್ಣೆಯಲ್ಲಿ ಉತ್ತಮ ಪ್ರಮಾಣದ ಫೈಟೊಸ್ಟೆರಾಲ್ ಗಳಿವೆ. ಇದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಸೂರ್ಯಕಾಂತಿ ಎಣ್ಣೆಯ ಸೇವನೆಯು ದೇಹದ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ತೂಕ ಇಳಿಸಿಕೊಳ್ಳಲು ಸೂರ್ಯಕಾಂತಿ ಎಣ್ಣೆಯನ್ನು ಹೇಗೆ ಸೇವಿಸುವುದು?
ಸೂರ್ಯಕಾಂತಿ ಎಣ್ಣೆಯನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತದೆ.ಈ ಎಣ್ಣೆಯನ್ನು ಬಳಸುವಾಗ ಎಣ್ಣೆ ಹೆಚ್ಚು ಬಿಸಿಯಾಗದಂತೆ ನೋಡಿಕೊಳ್ಳಬೇಕು. ಇದನ್ನು ಲೆಂಟಿಲ್, ಗ್ರೇವಿ, ಸೂಪ್ ಮತ್ತು ಬೇಕಿಂಗ್ನಲ್ಲಿ ಬಳಸಬಹುದು. ಇದಲ್ಲದೆ, ಸೂರ್ಯಕಾಂತಿ ಎಣ್ಣೆಯನ್ನು ಸಲಾಡ್ ಗೆ ಸೇರಿಸಬಹುದು. ಹೆಚ್ಚು ಸೂರ್ಯಕಾಂತಿ ಎಣ್ಣೆ ಸೇವನೆ ದೇಹಕ್ಕೆ ಹಾನಿಕಾರಕವಾಗಿದೆ. ಅದನ್ನು ಸೇವಿಸುವ ಮೊದಲು, ಡೋಸೇಜ್ ಮತ್ತು ವಿಧಾನದ ಬಗ್ಗೆ ವೈದ್ಯರು ಅಥವಾ ತಜ್ಞರನ್ನು ಸಂಪರ್ಕಿಸಿ.
ಇದನ್ನೂ ಓದಿ : ಕಸ್ಟರ್ಡ್ ಆಪಲ್ ಸೇವನೆಯಿಂದ ಆರೋಗ್ಯಕ್ಕಿದೆ ಇಷ್ಟೆಲ್ಲಾ ಪ್ರಯೋಜನ
ಸೂರ್ಯಕಾಂತಿ ಎಣ್ಣೆಯನ್ನು ಅದರ ಬೀಜಗಳಿಂದ ಹೊರತೆಗೆಯಲಾಗುತ್ತದೆ. ಮಾರುಕಟ್ಟೆಯಲ್ಲಿ ಹಲವು ಬಗೆಯ ಸೂರ್ಯಕಾಂತಿ ಎಣ್ಣೆ ಲಭ್ಯವಿದ್ದು, ಸೂಕ್ತ ಸಂಶೋಧನೆಯ ನಂತರವೇ ಖರೀದಿಸಬೇಕು. ಸೂರ್ಯಕಾಂತಿ ಎಣ್ಣೆಯು ಸ್ಟಿಯರಿಕ್ ಆಮ್ಲ, ಒಲೀಕ್ ಆಮ್ಲ, ಪಾಲ್ಮಿಟಿಕ್ ಆಮ್ಲ ಮತ್ತು ಲಿನೋಲೆನಿಕ್ ಆಮ್ಲವನ್ನು ಹೊಂದಿರುತ್ತದೆ. ಸೂರ್ಯಕಾಂತಿ ಎಣ್ಣೆಯನ್ನು ಸೇವಿಸುವುದರಿಂದ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಅಧಿಕ ಕೊಲೆಸ್ಟ್ರಾಲ್ ಮತ್ತು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. )
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.