ಗುಜರಾತ್‌ನ ನಾಡಿಯಾಡ್‌ನಲ್ಲಿ 3 ಅಂತಸ್ತಿನ ಅಪಾರ್ಟ್ಮೆಂಟ್ ಕುಸಿತ, ನಾಲ್ವರ ಸಾವು

ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆಗಾಗಿ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ.

Last Updated : Aug 10, 2019, 10:18 AM IST
ಗುಜರಾತ್‌ನ ನಾಡಿಯಾಡ್‌ನಲ್ಲಿ 3 ಅಂತಸ್ತಿನ ಅಪಾರ್ಟ್ಮೆಂಟ್ ಕುಸಿತ, ನಾಲ್ವರ ಸಾವು title=
Pic Courtesy: ANI

ಖೇಡಾ: ಗುಜರಾತ್‌ನ ಖೇಡಾ ಜಿಲ್ಲೆಯ ನಾಡಿಯಾಡ್‌ನ ಪ್ರಗತಿನಗರದಲ್ಲಿ ಶುಕ್ರವಾರ ತಡರಾತ್ರಿ ಮೂರು ಅಂತಸ್ತಿನ ಅಪಾರ್ಟ್‌ಮೆಂಟ್ ಕಟ್ಟಡ ಕುಸಿದು ನಾಲ್ಕು ಜನರು ಮೃತಪಟ್ಟಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ.

ಕನಿಷ್ಠ ಏಳರಿಂದ ಎಂಟು ಜನರು ಅವಶೇಷಗಳಲ್ಲಿ ಸಿಕ್ಕಿರುವ ಶಂಕೆ ವ್ಯಕ್ತವಾಗಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಭಾರಿ ಮಳೆಯಿಂದಾಗಿ ಈ ಪ್ರದೇಶದಲ್ಲಿ ವಸತಿ ಮಂಡಳಿ ಕಟ್ಟಡ ಕುಸಿದಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ಯಂತ್ರಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಪ್ರಾರಂಭಿಸಿವೆ., ಮಳೆ ಮತ್ತು ಜಲಾವೃತತೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿ ಉಂಟಾಗಿದೆ.

ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆಗಾಗಿ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ.
 

Trending News