ಅಹಮದಾಬಾದ್: ದಕ್ಷಿಣ ಭಾರತದ ರಾಜ್ಯಗಳಲ್ಲಿ ಮತ್ತು ಗುಜರಾತ್‌ನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ರಾಜ್ಯದ ಅನೇಕ ಭಾಗಗಳಲ್ಲಿ ಪ್ರವಾಹದಂತಹ ಪರಿಸ್ಥಿತಿಗಳು ನಿರ್ಮಾಣಗೊಂಡಿದೆ. ಗುಜರಾತ್‌ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಳೆದ 12 ಗಂಟೆಗಳಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ 98 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕಳೆದ 12 ಗಂಟೆಗಳಲ್ಲಿ, ಭಾರಿ ಮಳೆಯಿಂದಾಗಿ ಹಳೆಯ ಮನೆಗಳು ಬಿದ್ದು ಎರಡು ಘಟನೆಗಳಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಖೇಡಾದಲ್ಲಿ 4 ಮತ್ತು ಅಹಮದಾಬಾದ್‌ನಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಸೂರತ್‌ನಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಗುಜರಾತ್‌ನಾದ್ಯಂತ ಮಳೆಯಾಗುತ್ತಿದ್ದರೂ, ಕಳೆದ 12 ಗಂಟೆಗಳಲ್ಲಿ ಮಳೆಯಿಂದಾಗಿ ಹೆಚ್ಚು ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಗುಜರಾತ್‌ನ ಎಲ್ಲಾ 251 ತಹಸಿಲ್‌ಗಳಲ್ಲಿ ಮಳೆಯಾಗಿದೆ. ಬೊಟಾಡ್ ಜಿಲ್ಲೆಯ ಬಾರ್ವಾಲಾದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 15 ಇಂಚು ಮಳೆಯಾಗಿದೆ.
ಗುಜರಾತ್‌ನಾದ್ಯಂತ 3 ಇಂಚುಗಳಿಂದ 15 ಇಂಚುಗಳಷ್ಟು ಮಳೆಯಾಗಿದೆ. ಸರ್ದಾರ್ ಸರೋವರ್ ಅಣೆಕಟ್ಟಿನಿಂದ ಶುಕ್ರವಾರ ನರ್ಮದಾಗೆ ನೀರನ್ನು ಬಿಡುಗಡೆ ಮಾಡಲಾಗಿದ್ದು ಗುಜರಾತ್‌ಗೆ ನಿಟ್ಟುಸಿರು ಬಿಡುವಂತಾಗಿದೆ.