ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಚಿಂತಾಜನಕ; ಇಂದು ಏಮ್ಸ್ ಆಸ್ಪತ್ರೆಗೆ ಗಣ್ಯರ ಭೇಟಿ

ಶುಕ್ರವಾರ ಸಂಜೆಯಿಂದ ಜೇಟ್ಲಿಯ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ರಾತ್ರಿ 11 ಗಂಟೆ ಸಮಯದಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದರು. 

Last Updated : Aug 17, 2019, 09:26 AM IST
ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಚಿಂತಾಜನಕ; ಇಂದು ಏಮ್ಸ್ ಆಸ್ಪತ್ರೆಗೆ ಗಣ್ಯರ ಭೇಟಿ title=

ನವದೆಹಲಿ: ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಅನೇಕ ಕೇಂದ್ರ ಸಚಿವರು ಸೇರಿದಂತೆ ಗಣ್ಯರು ಇಂದು ಬೆಳಿಗ್ಗೆ 10 ಗಂಟೆ ವೇಳೆಗೆ ಕೇಂದ್ರ ಸಚಿವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.

ಶುಕ್ರವಾರ ಸಂಜೆಯಿಂದ ಜೇಟ್ಲಿಯ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ರಾತ್ರಿ 11 ಗಂಟೆ ಸಮಯದಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದರು. ಇಂದೂ ಸಹ ಬೆಳಿಗ್ಗೆ 10 ಗಂಟೆಗೆ ಮೋದಿ, ಶಾ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಸ್ಥಿತಿ ತಿಳಿಯಲಿದ್ದಾರೆ. 

ಹೃದಯ ಮತ್ತು ಶ್ವಾಸಕೋಶಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹಾಗಾಗಿ  ಅವರನ್ನು ಲೈಫ್ ಸಪೋರ್ಟ್ ನಲಿ ಇರಿಸಲಾಗಿದೆ ಎನ್ನಲಾಗಿದೆ. ಕಳೆದೆರಡು ದಿನಗಳಿಗಿಂತ ಶನಿವಾರ ಜೇಟ್ಲಿ ಅವರ ಆರೋಗ್ಯ ಬಿಗಡಾಯಿಸಿದ್ದು, ಯಾವುದೇ ನಿಖರ ಮಾತಿ ದೊರೆಯದ ಕಾರಣ ಎಲ್ಲರಲ್ಲಿ ಆತಂಕ ಮನೆಮಾಡಿದೆ.

ಉಸಿರಾಟ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರನ್ನು ಆಗಸ್ಟ್ 9 ಬೆಳಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. 66 ವರ್ಷದ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್, ಹೃದ್ರೋಗ ತಜ್ಞರು ತಪಾಸಣೆ ಮಾಡಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವಧನ್, ಗೃಹ ಸಚಿವ ಅಮಿತ್ ಶಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

Trending News