Pension Rules : ಮಹಿಳೆಯರಿಗೆ ರಾಜ್ಯ ಸರ್ಕಾರದ ಬಹು ದೊಡ್ಡ ಕೊಡುಗೆ : ಇನ್ನು 60 ಅಲ್ಲ 50 ವರ್ಷದಿಂದಲೇ ಸಿಗುವುದು ಪಿಂಚಣಿ

Women pension Rules :ಮಹಿಳೆಯರ ಪಿಂಚಣಿ ಅರ್ಹತೆಯ ವಯಸ್ಸನ್ನು 60 ವರ್ಷದಿಂದ 50 ವರ್ಷಕ್ಕೆ ಇಳಿಸಲು ಸರ್ಕಾರ ನಿರ್ಧರಿಸಿದೆ. ಮಹಿಳೆಯರಿಗೆ ನೀಡುವ ಪಿಂಚಣಿ ಅರ್ಹತಾ ವಯಸ್ಸನ್ನು  50 ವರ್ಷಕ್ಕೆ ಇಳಿಸುವ ಬಗ್ಗೆ ಹೇಳಲಾಗಿದೆ.   

Written by - Ranjitha R K | Last Updated : Jan 17, 2024, 10:04 AM IST
  • ಮಹಿಳೆಯರ ಪಿಂಚಣಿ ಅರ್ಹತೆಯ ವಯಸ್ಸನ್ನು 60 ವರ್ಷದಿಂದ 50 ವರ್ಷಕ್ಕೆ ಇಳಿಕೆ
  • ಮಹಿಳೆಯರಿಗಾಗಿ ಬಹು ದೊಡ್ಡ ಘೋಷಣೆ ಮಾಡಿದ ಸರ್ಕಾರ
  • 18 ಲಕ್ಷ ಹೊಸ ಫಲಾನುಭವಿಗಳ ಸೇರ್ಪಡೆ
Pension Rules  : ಮಹಿಳೆಯರಿಗೆ ರಾಜ್ಯ ಸರ್ಕಾರದ ಬಹು ದೊಡ್ಡ ಕೊಡುಗೆ : ಇನ್ನು 60 ಅಲ್ಲ 50 ವರ್ಷದಿಂದಲೇ ಸಿಗುವುದು ಪಿಂಚಣಿ   title=

Pension Rules : ಮಹಿಳೆಯರ ಪಿಂಚಣಿ ಅರ್ಹತೆಯ ವಯಸ್ಸನ್ನು 60 ವರ್ಷದಿಂದ 50 ವರ್ಷಕ್ಕೆ ಇಳಿಸಲು ಜಾರ್ಖಂಡ್  ಸರ್ಕಾರ ನಿರ್ಧರಿಸಿದೆ. ಈ ಕುರಿತು ಪ್ರಸ್ತಾವನೆ ಅಂತಿಮ ಹಂತದಲ್ಲಿದೆ ಎಂದು ಮಹಿಳಾ, ಮಕ್ಕಳ ಅಭಿವೃದ್ಧಿ ಮತ್ತು ಸಾಮಾಜಿಕ ಭದ್ರತಾ ಇಲಾಖೆಯ ಕಾರ್ಯದರ್ಶಿ ಕೃಪಾ ನಂದ್ ಝಾ ತಿಳಿಸಿದ್ದಾರೆ. ಪ್ರಸ್ತಾವನೆಯಡಿಯಲ್ಲಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳೆಯರಿಗೆ ನೀಡುವ ಪಿಂಚಣಿ ಅರ್ಹತಾ ವಯಸ್ಸನ್ನು  50 ವರ್ಷಕ್ಕೆ ಇಳಿಸುವ ಬಗ್ಗೆ ಹೇಳಲಾಗಿದೆ. 

ಜಾರ್ಖಂಡ್‌ನ ಹೇಮಂತ್ ಸೊರೆನ್ ಸರ್ಕಾರವು ಮಹಿಳೆಯರಿಗೆ ದೊಡ್ಡ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಈ ಹಿಂದೆ ಡಿಸೆಂಬರ್ 29 ರಂದು ರಾಜ್ಯದ ಆದಿವಾಸಿಗಳು ಮತ್ತು ದಲಿತರು 60 ವರ್ಷ ವಯಸ್ಸಿನ ಬದಲಿಗೆ 50 ವರ್ಷ ವಯಸ್ಸಿನ ಪಿಂಚಣಿ ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ ಎಂದು ಘೋಷಿಸಿದ್ದರು. ಮುಂದಿನ ಸಭೆಯಲ್ಲಿ ಈ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡುವ ವಿಶ್ವಾಸವನ್ನು ಕೂಡಾ ವ್ಯಕ್ತಪಡಿಸಿದ್ದರು. 

ಇದನ್ನೂ ಓದಿ : Union Budget 2024: ಈ ಬಾರಿಯ ಬಜೆಟ್ ನಲ್ಲಿ ಮಹಿಳೆಯರಿಗೆ ಸಿಗಲಿದೆಯಾ ಈ ಸಂತಸದ ಸುದ್ದಿ?

18 ಲಕ್ಷ ಹೊಸ ಫಲಾನುಭವಿಗಳ ಸೇರ್ಪಡೆ: 
ಸರ್ಕಾರದ ಈ ನಿರ್ಧಾರ ಜಾರಿಗೆ ಬಂದರೆ ಜಾರ್ಖಂಡ್‌ನಲ್ಲಿ ಹೆಚ್ಚುವರಿ 18 ಲಕ್ಷ ಫಲಾನುಭವಿಗಳು ಪಿಂಚಣಿ ಯೋಜನೆಗೆ ಸೇರಲಿದ್ದಾರೆ. ರಾಜ್ಯದಲ್ಲಿ ಒಟ್ಟು 35.68 ಲಕ್ಷ ಫಲಾನುಭವಿಗಳು ಪಿಂಚಣಿ ಪಡೆಯುತ್ತಿದ್ದಾರೆ.ಕಳೆದ ನಾಲ್ಕು ವರ್ಷಗಳಲ್ಲಿ ಪಿಂಚಣಿದಾರರ ಸಂಖ್ಯೆ ಶೇಕಡಾ 82ರಷ್ಟು ಹೆಚ್ಚಾಗಿದೆ.  

ಇದು ಅಂಗನವಾಡಿ ಯೋಜನೆ: 
ಅಂಗನವಾಡಿ ಕೇಂದ್ರಗಳಿಗೆ ಇಲಾಖೆ ಸಮಗ್ರ ಯೋಜನೆ ಸಿದ್ಧಪಡಿಸಿದೆ ಎಂದೂ ಝಾ ತಿಳಿಸಿದ್ದಾರೆ. ಇನ್ನು ಮುಂದೆ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಬೆಂಚು, ಡೆಸ್ಕ್ ವ್ಯವಸ್ಥೆ ಮಾಡಲಾಗುವುದು ಎಂಡು ಹೇಳಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶದ ಜೊತೆಗೆ ಪೂರ್ವ ಪ್ರಾಥಮಿಕ ಶಾಲಾ ಪ್ರಯೋಜನಗಳನ್ನು ಒದಗಿಸಲು ಚಳಿಗಾಲದ ಸಮವಸ್ತ್ರ, ಓದುವ ಮತ್ತು ಬರೆಯುವ ಸಾಮಗ್ರಿಗಳನ್ನು ಸಹ ಒದಗಿಸಲಾಗುವುದು. 

ಜಾರ್ಖಂಡ್‌ನಲ್ಲಿ 38,432 ಅಂಗನವಾಡಿ ಕೇಂದ್ರಗಳಿವೆ, ಆದರೆ 25,000 ಮಾತ್ರ ಸ್ವಂತ ಕಟ್ಟಡಗಳನ್ನು ಹೊಂದಿವೆ. ಮೂರು ವರ್ಷಗಳಲ್ಲಿ ಉಳಿದ ಕೇಂದ್ರಗಳಿಗೆ ಕಟ್ಟಡಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದೇವೆ ಎಂದು ಝಾ ಹೇಳಿದ್ದಾರೆ. ಇದಲ್ಲದೇ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೂ ಹೊಸ ಯೋಜನೆಗಳೂ ಜಾರಿಯಲ್ಲಿವೆ.

ಇದನ್ನೂ ಓದಿ World's Five Super Rich: ಇವರೇ ನೋಡಿ ವಿಶ್ವದ ಐದು ಆಗರ್ಭ ಶ್ರೀಮಂತ ವ್ಯಕ್ತಿಗಳು, ಪ್ರತಿ ಗಂಟೆ ಗಳಿಕೆ ₹116195590000

ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯಲಿಂಗಿಗಳಿಗೆ ಪ್ರತ್ಯೇಕ ಶೌಚಾಲಯ :
ಪ್ರತಿ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯಲಿಂಗಿಗಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟ್ರಾನ್ಸ್‌ಜೆಂಡರ್ ಬೋರ್ಡ್ ಸ್ಥಾಪಿಸಲು ಸಹ ಪ್ರಸ್ತಾವನೆ ಸಲ್ಲಿಸಲಾಗಿದೆ. ಅವರಿಗಾಗಿ ವೃದ್ಧಾಶ್ರಮವನ್ನೂ ನಿರ್ಮಿಸಲು ನಿರ್ಧರಿಸಲಾಗಿದೆ. 

ರಾಜ್ಯದಲ್ಲಿ ವಿಧವಾ ಪುನರ್ವಿವಾಹಕ್ಕೆ ಜಾರ್ಖಂಡ್ ಸರ್ಕಾರವೂ ಉತ್ತೇಜನ ನೀಡುತ್ತಿದ್ದು, ಪ್ರಸಕ್ತ ಹಣಕಾಸು ವರ್ಷದಿಂದ ಯೋಜನೆಯನ್ನು ಆರಂಭಿಸಿದೆ. ಇದರಡಿಯಲ್ಲಿ 2 ಲಕ್ಷ ರೂ.ಗಳ ಏಕರೂಪದ ಗೌರವಧನವನ್ನು ಹೆಚ್ಚಿಸಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News