ನವದೆಹಲಿ: ಬುಧುವಾರ ರಾತ್ರಿ ಐಎನ್ಎಕ್ಷ ಪ್ರಕರಣದ ವಿಚಾರವಾಗಿ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ನಿನ್ನೆ 2011 ರಲ್ಲಿ ತಾವೇ ಉದ್ಘಾಟಿಸಿದ್ದ ನೂತನ ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಕಚೇರಿಯಯಲ್ಲಿ ರಾತ್ರಿ ಕಳೆದಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಅವರು ನವೆಂಬರ್ 2008 ರಿಂದ ಜುಲೈ 2012 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು , 2011 ರ ಜೂನ್ 30 ರಂದು ಅಂದಿನ ಪ್ರಧಾನಿ ಮನಮೋಹನ್ ಅವರ ಸಮ್ಮುಖದಲ್ಲಿ ನಡೆದ ಸಿಬಿಐ ಕೇಂದ್ರ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಪ್ರಮುಖ ಅತಿಥಿಗಳಾಗಿದ್ದರು.
ಯುಪಿಎ ಆಡಳಿತದ ಹತ್ತು ವರ್ಷಗಳ ಅವಧಿಯಲ್ಲಿ ಪ್ರಮುಖ ಮಂತ್ರಿಗಳಲ್ಲಿ ಒಬ್ಬರಾದ ಚಿದಂಬರಂ ಅವರನ್ನು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧಿಸಲು ಬುಧವಾರ ರಾತ್ರಿ ಜೋರ್ ಬಾಗ್ನಲ್ಲಿರುವ ಅವರ ನಿವಾಸದಿಂದ ಅವರನ್ನು ತನಿಖಾ ಸಂಸ್ಥೆಯ ಪ್ರಧಾನ ಕಚೇರಿಗೆ ಕರೆದೊಯ್ಯಲಾಯಿತು. ನಿನ್ನೆ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಏಕಾಏಕಿ ಕಾಣಿಸಿಕೊಂಡ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ತಮ್ಮ ವಿರುದ್ಧ ಇರುವ ಆರೋಪಗಳು ಸುಳ್ಳು ಎಂದು ಹೇಳಿದರು.
ಐಎನ್ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಚಿದಂಬರಂ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಸುಪ್ರೀಂ ಕೋರ್ಟ್ನಲ್ಲಿ ಕೇವಿಟ್ಗಳನ್ನು ಸಲ್ಲಿಸಿದ್ದವು..ಇನ್ನೊಂದೆಡೆ ಸುಪ್ರೀಂಕೋರ್ಟ್ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಸಿಬಿಐ ಮತ್ತು ಐಡಿಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಇಡಿ ಸಲ್ಲಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರ ವಕೀಲರು ಮಂಗಳವಾರದಂದು ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದರು.